LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಬುರುಡೆ ಕೇಸ್ ಗೆ ಬಿಗ್ ಟ್ವಿಸ್ಟ್: 200 ಕೋಟಿ ರೂ. ಷಡ್ಯಂತ್ರ, ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನನ್ನು ಬಳಸಿಕೊಂಡು ಧರ್ಮಸ್ಥಳ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ.

 ಈ ಬಗ್ಗೆ ಎಸ್ಐಟಿ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲು ಕೋರಿದ್ದಾನೆ. ಷಡ್ಯಂತ್ರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠಲ್ ಗೌಡ, ಜಯಂತ್ ಯುಟ್ಯೂಬರ್ ಗಳಾದ ಎಂ.ಡಿ. ಸಮೀರ್, ಅಜಯ್, ದಿನೇಶ್ ಸೇರಿದಂತೆ ಹಲವರ ಪಾತ್ರದ ಬಗ್ಗೆ ಉಲ್ಲೇಖಿಸಲಾಗಿದ್ದು, ನಟ ಪ್ರಕಾಶ್ ರಾಜ್ ಅವರ ಬಗ್ಗೆಯೂ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಎಸ್ಐಟಿ ಮತ್ತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವಿಠಲ್ ಗೌಡ ತಮ್ಮನ್ನು ಮಹೇಶ್ ಶೆಟ್ಟಿ ತಿಮರೋಡಿಗೆ ಪರಿಚಯಿಸಿದ್ದ. ಧರ್ಮಸ್ಥಳದಲ್ಲಿ ಅನೇಕ ಶವಗಳನ್ನು ದಫನ್ ಮಾಡಲಾಗಿದೆ. ಅಲ್ಲಿ ಸಾವಿರಾರು ಶವಗಳಿವೆ ಎಂದು ಹೇಳಲು ತಿಳಿಸಿದ್ದ. ನಂತರ ಗಿರೀಶ್ ಮಟ್ಟಣ್ಣನವರ್, ವಿಠಲ್ ಗೌಡ ಮತ್ತಿತರರು ಕೇರಳ, ತಮಿಳುನಾಡು ಸೇರಿದಂತೆ ಹಲವು ಕಡೆಗೆ ಕರೆದೊಯ್ದಿದ್ದರು. ಆಗಾಗ 5000, 15000 ರೂ. ಹಣ ಕೊಡುತ್ತಿದ್ದರು.

ನಂತರ ಬೆಂಗಳೂರಿನ ಜಯಂತ್ ಮನೆಗೆ ಕರೆದುಕೊಂಡು ಹೋಗಿ ತಲೆ ಬುರುಡೆ ಕೊಟ್ಟು ಕೈಯಲ್ಲಿ ಹಿಡಿದುಕೊಳ್ಳುವಂತೆ ಸೂಚಿಸಿ ಫೋಟೋ ತೆಗೆದುಕೊಂಡು ನಂತರ ವಕೀಲರ ಕಚೇರಿಗೆ ಕರೆದೊಯ್ದು ಅಲ್ಲಿ ಸಹಿ ಹಾಕಿಸಿಕೊಂಡಿದ್ದರು. ಸುಜಾತಾ ಭಟ್ ಅವರೊಂದಿಗೆ ಗಿರೀಶ್ ಮಟ್ಟಣ್ಣನವರ್ ತಮ್ಮನ್ನು ಕೂಡ ದೆಹಲಿಗೆ ಕರೆದುಕೊಂಡು ಹೋಗಿದ್ದರು. ನಂತರ ಉಜಿರೆಯ ತಿಮರೋಡಿ ಮನೆಯಲ್ಲಿ ಕೂಡಿಹಾಕಲಾಗಿತ್ತು. ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿಗೆ ಮಸಾಜ್ ಮಾಡಲು ತಮಗೆ ಒತ್ತಾಯಿಸಲಾಗುತ್ತಿತ್ತು. ಅವರ ಜಮೀನಿನಲ್ಲಿ ಕೆಲಸ ಮಾಡಿಸುತ್ತಿದ್ದರು. ವಕೀಲರು ಹೇಳಿದಂತೆ ನ್ಯಾಯಾಲಯಕ್ಕೆ ಹೇಳದಿದ್ದರೆ ಕೊಂದು ಅದೇ ಜಾಗದಲ್ಲಿ ಹೂತು ಹಾಕುವುದಾಗಿ ಬೆದರಿಸಿದ್ದರು.

ಎಂ.ಡಿ. ಸಮೀರ್, ಅಜಯ್ ಅವರ ಯುಟ್ಯೂಬ್ ಚಾನೆಲ್ ಗಳಲ್ಲಿ ಅವರ ಸೂಚನೆಯಂತೆ ಹೇಳಿಸಿ ರೆಕಾರ್ಡ್ ಮಾಡಿಸಲಾಯಿತು. ಮನೆ ಕಟ್ಟಲು 5 ಲಕ್ಷ ನೀಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ 50 ಲಕ್ಷ ರೂಪಾಯಿ ಕೊಡುವುದಾಗಿಯೂ ಹೇಳಿದ್ದರು ಎಂದು ಚಿನ್ನಯ್ಯ ತಿಳಿಸಿದ್ದಾನೆ.

ಖ್ಯಾತ ನಟ ಪ್ರಕಾಶ್ ರಾಜ್ ಹೆಸರನ್ನು ಕೂಡ ಚಿನ್ನಯ್ಯ ಉಲ್ಲೇಖಿಸಿದ್ದಾನೆ. ತಲೆ ಬುರುಡೆ ನೀಡಿ ದೂರು ಕೊಟ್ಟ ಬಳಿಕ ಕೇರಳದ ರೆಸಾರ್ಟ್ ಗೆ ತನ್ನನ್ನು ಕರೆದೊಯ್ಯಲಾಗಿತ್ತು. ನಟ ಪ್ರಕಾಶ್ ರಾಜ್ ಅವರಿಗೆ ಕರೆ ಮಾಡಿ ಫೋನ್ ನೀಡಿದ್ದರು. ತಮಿಳುನಲ್ಲಿ ಮಾತನಾಡಿದ ಪ್ರಕಾಶ್ ರಾಜ್ ಅವರು ಗಿರೀಶ್ ಮಟ್ಟಣ್ಣನವರ್ ಹೇಳಿಕೊಟ್ಟಂತೆ ಹೇಳಿಕೆ ನೀಡಬೇಕು. ನಾನು ಬಂದಾಗ ನಿನ್ನನ್ನು ಅಪ್ಪಿಕೊಳ್ಳುತ್ತೇನೆ ಎಂದಿದ್ದರು.  ಕರ್ನಾಟಕ ಸರ್ಕಾರ ಬುರುಡೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದಾಗ ವೀರೇಂದ್ರ ಹೆಗಡೆಯವರನ್ನು ಜೈಲಿಗೆ ಕಳುಹಿಸುವ ಸಮಯ ಬಂದಿದೆ ಎಂದು ಸಂಭ್ರಮಿಸಿದ್ದರು. ಈ ಯೋಜನೆಯ ಬಜೆಟ್ 200 ಕೋಟಿ ರೂ. ಇದ್ದು, ವೀರೇಂದ್ರ ಹೆಗಡೆಯವರನ್ನು ಜೈಲಿಗೆ ಕಳುಹಿಸಲು ಸಹಕರಿಸಿದರೆ 50 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು ಎಂದು ತಿಳಿಸಿದ್ದಾರೆ.

ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರ ಮತ್ತು ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿದ್ದು, ಜೂನ್ 29 ರೊಳಗೆ ತನಿಖೆಯ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಲು ಸೂಚಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ