LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ: 200 ವೈದ್ಯರ ನೇರ, 1090 ವೈದ್ಯರ ಗುತ್ತಿಗೆ ನೇಮಕಾತಿ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 1290 ವೈದ್ಯರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, ತಕ್ಷಣವೇ 200 ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಜವಾಬ್ದಾರಿ ವಹಿಸಿಕೊಂಡಿರುವ ಸಚಿವರು ಬುಧವಾರ ಆರೋಗ್ಯ ಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

1290 ವೈದ್ಯರ ಹುದ್ದೆ ನೇಮಕಾತಿಗೆ ನಿರ್ಧರಿಸಲಾಗಿದೆ. 200 ವೈದ್ಯರ ನೇರ ನೇಮಕ ಮಾಡಿ ಉಳಿದ 1090 ವೈದ್ಯರನ್ನು ಜಿಲ್ಲಾ ಮುಖ್ಯ ಆರೋಗ್ಯ ಅಧಿಕಾರಿ ಮೂಲಕ ಅರ್ಜಿ ಆಹ್ವಾನಿಸಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 1290 ಎಂಬಿಬಿಎಸ್ ವೈದ್ಯರು, 924 ತಜ್ಞ ವೈದ್ಯರು, 892 ಶುಶ್ರೂಷಕರ ಕೊರತೆ ಇದೆ. ಮೊದಲ ಹಂತದಲ್ಲಿ 1290 ವೈದ್ಯರ ನೇಮಕಾತಿಗೆ ನಿರ್ಧರಿಸಲಾಗಿದೆ. 400 ಲ್ಯಾಬ್ ಟೆಕ್ನಿಷಿಯನ್ಸ್, 400 ಫಾರ್ಮಾಸಿಸ್ಟ್, 400 ಶುಶ್ರೂಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.

ಗುತ್ತಿಗೆ ಆಧಾರದಲ್ಲಿ ಸೇವೆಗೆ ಎಂಬಿಬಿಎಸ್ ಅಥವಾ ಪಿಜಿ ವ್ಯಾಸಂಗ ಮಾಡಿದ ವೈದ್ಯರು ಡಿಎಚ್ಒ ಗೆ ಅರ್ಜಿ ಸಲ್ಲಿಸಬಹುದು. ಹೀಗೆ ನೇಮಕವಾದವರು 5 ವರ್ಷ ಉತ್ತಮವಾಗಿ ಕಾರ್ಯನಿರ್ವಹಿಸಿದಲ್ಲಿ ಅವರ ಕಾರ್ಯಕ್ಷಮತೆ ಆಧರಿಸಿ ಕಾಯಂ ಸರ್ಕಾರಿ ವೈದ್ಯರನ್ನಾಗಿ ನೇಮಕ ಮಾಡಿಕೊಳ್ಳಲಾಗುವುದು. ಅವರು ಪುನಃ ಪರೀಕ್ಷೆ ಬರೆಯುವ ಅಗತ್ಯ ಇರುವುದಿಲ್ಲ ಎಂದು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ