ಬೆಂಗಳೂರು: ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ವತಿಯಿಂದ ಮೇ 12, 13ರಂದು ಸೆಂಟ್ರಲ್ ಕಾಲೇಜು ಕ್ಯಾಂಪಸ್ ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಬೆಂಗಳೂರು ನಗರ ವಿವಿಯ ವಿವಿಧ ವಿಭಾಗಗಳು, ಘಟಕ ಕಾಲೇಜುಗಳು ಮತ್ತು ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಮತ್ತು ಹೊರ ರಾಜ್ಯದ ಸುಮಾರು 200ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಖಾಲಿ ಸ್ಥಾನಗಳಿಗೆ ಸಂದರ್ಶನ ನಡೆಸಲಿದ್ದಾರೆ.
ವಿವಿಯ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು, ಘಟಕ ಹಾಗೂ ಸಂಯೋಜಿತ ಕಾಲೇಜುಗಳು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ತಮ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳುವಂತೆ ಕುಲಪತಿ ಪ್ರೊ. ಬಿ. ರಮೇಶ್ ಮನವಿ ಮಾಡಿದ್ದಾರೆ.