ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಅಕ್ಟೋಬರ್ 22ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಂಜೆ ಹಾಗೂ ರಾತ್ರಿ ವೇಳೆ ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮಳೆಯ ಆರ್ಭಟ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' (Yellow Alert) ಘೋಷಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆಡಳಿತ ಯಂತ್ರಕ್ಕೆ ಸೂಚನೆ ನೀಡಲಾಗಿದೆ.