LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ಒಂಬತ್ತು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇದರೊಂದಿಗೆ ಒಟ್ಟು 226 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮನವಿಪತ್ರ (ಮೆಮೊರಾಂಡಮ್) ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ 217 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿತ್ತು. ಇದೀಗ ಮತ್ತೆ ಒಂಬತ್ತು ತಾಲ್ಲೂಕುಗಳನ್ನು ಸೇರ್ಪಡೆಗೊಳಿಸಿರುವುದರಿಂದ ಒಟ್ಟು ಸಂಖ್ಯೆ 226ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಉಳಿದ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದ್ದು, ಟ್ರಿಗರ್-1 ಮಾನದಂಡಗಳಡಿ ಅರ್ಹತೆ ಪಡೆದ ತಾಲ್ಲೂಕುಗಳನ್ನು ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆಗೆ ಒಳಪಡಿಸಲಾಗುವುದು. ಈ ಪ್ರಕ್ರಿಯೆಯಲ್ಲಿ ಅರ್ಹತೆ ಕಂಡುಬಂದರೆ ಮತ್ತಷ್ಟು ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲವಾದಲ್ಲಿ ಪ್ರಸ್ತುತ ಘೋಷಿಸಿರುವ 226 ತಾಲ್ಲೂಕುಗಳ ಪಟ್ಟಿಯೇ ಅಂತಿಮವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರಕ್ಕೆ ಅಂತಿಮ ಮನವಿಪತ್ರ ಸಲ್ಲಿಸಲು ಸರ್ವಪಕ್ಷ ನಿಯೋಗ

ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮನವಿಪತ್ರವನ್ನು ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಮನವಿಪತ್ರ ಸಲ್ಲಿಸುವ ಸಂದರ್ಭದಲ್ಲಿ ಸರ್ವಪಕ್ಷ ನಿಯೋಗವನ್ನು ಕೇಂದ್ರಕ್ಕೆ ಕರೆದೊಯ್ಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.

ಸರ್ವಪಕ್ಷ ನಿಯೋಗದಲ್ಲಿ ಭಾಗವಹಿಸುವುದಿಲ್ಲ ಎಂದು ವಿರೋಧ ಪಕ್ಷದವರು ಈಗಾಗಲೇ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಮತ್ತೊಮ್ಮೆ ಅವರನ್ನು ಸಂಪರ್ಕಿಸಿ ನಿಯೋಗದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗುವುದು. ಅವರು ಭಾಗವಹಿಸಿದರೆ ಉತ್ತಮ. ಇಲ್ಲವಾದಲ್ಲಿ ಮುಖ್ಯಮಂತ್ರಿಗಳು, ನಾನು ಮತ್ತು ಕೆಲವು ಸಚಿವರೊಂದಿಗೆ ಕೇಂದ್ರಕ್ಕೆ ತೆರಳಿ, ಸಂಬಂಧಪಟ್ಟ ಕೇಂದ್ರ ಸಚಿವರು ಮತ್ತು ಪ್ರಧಾನಮಂತ್ರಿಯವರ ಭೇಟಿಗೆ ಸಮಯ ಕೋರಲಿದ್ದೇವೆ. ಅವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಹಾಗೂ ಪರಿಹಾರದ ಅಗತ್ಯವನ್ನು ವಿವರಿಸಿ ಅಂತಿಮ ಮನವಿಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.

ಬರದಿಂದ ₹60,000 ಕೋಟಿಗೂ ಅಧಿಕ ನಷ್ಟದ ಅಂದಾಜು

ರಾಜ್ಯದಲ್ಲಿ ಬರದಿಂದ ಉಂಟಾಗಿರುವ ನಷ್ಟದ ಕುರಿತು ಈಗಾಗಲೇ ಸುಮಾರು ₹46,000 ಕೋಟಿಯಷ್ಟು ಅಂದಾಜು ಮಾಡಲಾಗಿದೆ. ಅಂತಿಮ ಲೆಕ್ಕಾಚಾರದಲ್ಲಿ ನಷ್ಟದ ಪ್ರಮಾಣ ₹60,000 ಕೋಟಿಯಿಂದ ₹70,000 ಕೋಟಿಯವರೆಗೆ ತಲುಪಬಹುದು ಎಂಬ ಪ್ರಾಥಮಿಕ ಅಂದಾಜುಗಳಿವೆ ಎಂದು ತಿಳಿಸಿದರು.

ಆದರೆ, ಒಟ್ಟು ನಷ್ಟದ ಮೊತ್ತವನ್ನೇ ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಕೇಳಲು ಸಾಧ್ಯವಿಲ್ಲ. ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಪರಿಹಾರಕ್ಕೆ ಅರ್ಹವಾಗುವ ನಷ್ಟವನ್ನು ಪ್ರತ್ಯೇಕವಾಗಿ ಲೆಕ್ಕಾಚಾರ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಕಳೆದ ವರ್ಷ ಸುಮಾರು ₹49,000 ಕೋಟಿಯಷ್ಟು ನಷ್ಟ ಸಂಭವಿಸಿದ್ದರೂ, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಸುಮಾರು ₹18,000 ಕೋಟಿ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಕೋರಲಾಗಿತ್ತು. ಅದೇ ರೀತಿ ಈ ಬಾರಿಯೂ ₹60,000 ಕೋಟಿಯಷ್ಟು ನಷ್ಟ ಸಂಭವಿಸಿದರೆ, ಮಾರ್ಗಸೂಚಿಗಳ ಪ್ರಕಾರ ಅಂದಾಜು ₹18,000 ಕೋಟಿಯಿಂದ ₹20,000 ಕೋಟಿಯವರೆಗೆ ಪರಿಹಾರ ಕೋರಬೇಕಾಗಬಹುದು ಎಂದು ಹೇಳಿದರು.

ಇವು ಪ್ರಾಥಮಿಕ ಅಂದಾಜುಗಳಾಗಿದ್ದು, ಅಂತಿಮ ಅಂಕಿಅಂಶಗಳಲ್ಲ. ನಷ್ಟದ ಸಂಪೂರ್ಣ ವಿವರಗಳು ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಲೆಕ್ಕಾಚಾರ ಪೂರ್ಣಗೊಂಡ ಬಳಿಕವೇ ಕೇಂದ್ರದಿಂದ ಕೋರಬೇಕಾದ ಪರಿಹಾರದ ಮೊತ್ತವನ್ನು ಅಂತಿಮಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದು ಪಡಿಸಿರುವ ಹೈಕೋರ್ಟ್‌ ತೀರ್ಪಿನ ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ

ಎಸ್‌ಸಿ, ಎಸ್‌ಟಿ ಮೀಸಲಾತಿ ಬಗ್ಗೆ ಹೈಕೋರ್ಟ್ ತೀರ್ಪಿಗೆ ಸಂಬಂಧಪಟ್ಟ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮುಂದಿನ ಕಾನೂನಾತ್ಮಕ ಹಾಗೂ ಆಡಳಿತಾತ್ಮಕ ಕ್ರಮಗಳ ಬಗ್ಗೆ ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಚರ್ಚಿಸಲಾಗುವುದು. ವಿಶೇಷವಾಗಿ 9ನೇ ಅನುಸೂಚಿಗೆ ಸೇರಿಸುವ ಸಾಧ್ಯತೆ ಸೇರಿದಂತೆ ಮುಂದಿನ ಕ್ರಮಗಳ ಕುರಿತು ಸಮಿತಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸ್ಟಿಂಗ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಮೂಲಕ ತನಿಖೆ ನಡೆಸುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ತನಿಖೆಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನದ ಪೇಶಾವರದಲ್ಲಿ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿತ: ಮೃತರ ಸಂಖ್ಯೆ 35ಕ್ಕೆ ಏರಿಕೆಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಿಸಿಎಂ ಡಾ.ಜಿ ಪರಮೇಶ್ವರ್ದೀಪಾವಳಿ ವೇಳೆ ರಸ್ತೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸಲು ನಿಷೇಧ: ಬಾಂಬೆ ಹೈಕೋರ್ಟ್ ಮಹತ್ವದ ಆದೇಶಇಂಫಾಲದ ಬಿಎಸ್ಎಫ್ ಶಿಬಿರದಲ್ಲಿ ಫುಡ್ ಪಾಯ್ಸನಿಂಗ್ ನಿಂದ 81 ಸಿಬ್ಬಂದಿ, 3 ನಾಗರಿಕರು ಅಸ್ವಸ್ಥ: ಆಸ್ಪತ್ರೆಗೆ ದಾಖಲುಪುನೀತ್ ರಾಜ್‌ಕುಮಾರ್ ಸಾವು : ಕೊನೆಯ ಒಂದೂವರೆ ಗಂಟೆಯಲ್ಲಿ ಏನಾಯಿತು? ವೈದ್ಯರು ಬಿಚ್ಚಿಟ್ಟ ಆಘಾತಕಾರಿ ಮಾಹಿತಿ!ಮೊದಲ ದಿನವೇ ಬಾಕ್ಸ್ ಆಫೀಸ್ ಕೊಳ್ಳೆಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಜೈಲರ್ 2’ ಗಳಿಸಿದ್ದೆಷ್ಟು ಗೊತ್ತಾ…?ರೈತರಿಗೆ ದೀಪಾವಳಿ ಗಿಫ್ಟ್‌! ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್?ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿದ ರಾಕೇಶ್ ಶೆಟ್ಟಿ ಬಂಧನಕ್ಕೆ 2 ದಿನ ಡೆಡ್ ಲೈನ್ ಕೊಟ್ಟ HDK‘ಎಸ್ಐಆರ್’ ವಿವಾದದ ನಡುವೆಯೇ, ಅರ್ಹ ಮತದಾರರ ನೋಂದಣಿ ಹೆಚ್ಚಿಸಲು ಚುನಾವಣಾ ಆಯೋಗ ಮಹತ್ವದ ಹೆಜ್ಜೆ: SSR ನಡೆಸುವುದಾಗಿ ಘೋಷಣೆ