ನವದೆಹಲಿ: ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ಶನಿವಾರ ಫಲಾನುಭವಿ ರೈತರ ಖಾತೆಗೆ ಜಮಾ ಮಾಡಲಾಗುವುದು.
ವಿಕಸಿತ ಭಾರತ, ವಿಕಸಿತ ಪಶ್ಚಿಮ ಬಂಗಾಳದ ಸಂಕಲ್ಪಕ್ಕೆ ಹೊಸ ವೇಗ ನೀಡಲು ಪ್ರಧಾನಿ ಮೋದಿ ಶನಿವಾರ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಕೃಷಿ, ಗ್ರಾಮೀಣ ಅಭಿವೃದ್ಧಿ, ರೈಲ್ವೆ ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಧಾನಿಯವರು ಕಿಸಾನ್ ಸಮ್ಮಾನ್ ಯೋಜನೆಯ 23ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ತಲಾ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕ 6,000 ರೂ. ನೆರವು ನೀಡುವ ಯೋಜನೆ ಇದಾಗಿದೆ.
ಈ ಯೋಜನೆಯ 23ನೇ ಕಂತಿನ ಭಾಗವಾಗಿ ಒಟ್ಟು 18,880 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ದೇಶಾದ್ಯಂತ 9.44 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.