LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ: ಮೇ 26ರಿಂದ ಅರ್ಹತಾ ಪರೀಕ್ಷೆ

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಬಡ್ತಿ ನೀಡುವ ಅರ್ಹತಾ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಮೇ 26 ರಿಂದ 30ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈಗಾಗಲೇ ಎರಡು ಬಾರಿ ಪರೀಕ್ಷೆ ಮುಂದೂಡಲಾಗಿತ್ತು. ಮೊದಲ ಬಾರಿ ಶಾಲಾ ಪರೀಕ್ಷೆ ಸಮಯ ಮತ್ತು ಎರಡನೇ ಬಾರಿ ಜನಗಣತಿ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಜನಗಣತಿ ಕಾರ್ಯ ಮೇ 16ರೊಳಗೆ ಮುಗಿಯುವ ಹಿನ್ನೆಲೆಯಲ್ಲಿ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮೇ 26 ರಿಂದ 30ರವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ, ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿದೆ.

ಪ್ರವೇಶ ಪತ್ರಗಳನ್ನು ಶಿಕ್ಷಣ ಇಲಾಖೆ ವೆಬ್ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ. ಪ್ರವೇಶ ಪತ್ರದಲ್ಲಿ ನಮೂದಿಸಿದ ಸೂಚನೆಗಳನ್ನು ತಪ್ಪದೇ ಪಾಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.

ಪರಿಷ್ಕೃತ ವೇಳಾಪಟ್ಟಿ

ಮೇ 26ರಂದು ಕನ್ನಡ, ಉರ್ದು, ಗಣಿತ, ಜೀವಶಾಸ್ತ್ರ, ಇಂಗ್ಲಿಷ್, ಸಂಸ್ಕೃತ,

ಮೇ 27ರಂದು ಇತಿಹಾಸ, ಹಿಂದಿ

ಮೇ 29ರಂದು ಅರ್ಥಶಾಸ್ತ್ರ, ರಾಜ್ಯಶಾಸ್ತ್ರ

ಮೇ 30ರಂದು ಸಮಾಜಶಾಸ್ತ್ರ, ಭೂಗೋಳಶಾಸ್ತ್ರ ಪರೀಕ್ಷೆ ನಡೆಯಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ