LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

273 ವೈದ್ಯಕೀಯ ಸೀಟು ಉಳಿಕೆ: ಆಪ್ಷನ್ಸ್ ದಾಖಲಿಸಲು ಕೊನೆ ಅವಕಾಶ ನೀಡಿದ ಕೆಇಎ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ನ ಸ್ಟ್ರೇ ವೇಕೆನ್ಸಿ-2 ಸುತ್ತಿನ ಸೀಟು ಹಂಚಿಕೆ ನಂತರವೂ 275 ಸೀಟು ಉಳಿದಿದ್ದು, ಮತ್ತೊಮ್ಮೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಿದೆ.

ಇದುವರೆಗೂ ಸೀಟು ಹಂಚಿಕೆಯಾಗದ ಹಾಗೂ ಕಾಷನ್ ಡೆಪಾಸಿಟ್ ಕಟ್ಟಿರುವ ಅಭ್ಯರ್ಥಿಗಳು ಆಪ್ಷನ್ಸ್ ದಾಖಲಿಸಲು ಅರ್ಹರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಒಟ್ಟು 273 ವೈದ್ಯಕೀಯ ಹಾಗೂ ಎರಡು ದಂತ ವೈದ್ಯಕೀಯ ಸೀಟು ಉಳಿದಿದ್ದು, ಈ ಕಾಲೇಜುಗಳಿಗೆ ಅ.26ರಂದು ಬೆಳಿಗ್ಗೆ 10.30ರವರೆಗೆ ಆಪ್ಷನ್ಸ್ ದಾಖಲಿಸಬಹುದು. ಅದಾದ ಅರ್ಧ ಗಂಟೆಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಅ.26ರ ಸಂಜೆ 6ಗಂಟೆಯೊಳಗೆ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಂಸಿಸಿ ಆದೇಶಾನುಸಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅ.26 ಕೊನೆ ದಿನವಾಗಿದ್ದು ಈ ಹಿನ್ನೆಲೆಯಲ್ಲಿ ಈ ಗಡುವು ನಿಗದಿಪಡಿಸಲಾಗಿದೆ. ಒಂದು ವೇಳೆ ನಿಗದಿತ ಅವಧಿಯೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳದಿದ್ದಲ್ಲಿ ಹಂಚಿಕೆಯಾದ ಸೀಟು ರದ್ದಾಗಲಿಗೆ ಎಂದು ಪ್ರಸನ್ನ ಅವರು ಎಚ್ಚರಿಸಿದ್ದಾರೆ.

ಸ್ಟ್ರೇ ವೇಕೆನ್ಸಿ- 2 ಫಲಿತಾಂಶ ಪ್ರಕಟ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ನ ಸ್ಟ್ರೇ ವೇಕೆನ್ಸಿ-2 ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಿದೆ. ಈ ಸುತ್ತಿನಲ್ಲಿ‌ 13 ವೈದ್ಯಕೀಯ ಮತ್ತು 12 ದಂತ ವೈದ್ಯಕೀಯ ಸೀಟು ಹಂಚಿಕೆಯಾಗಿದ್ದು, ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅ.26 ಕೊನೆ ದಿನ ಎಂದು ಅವರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!