LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಕ್ಕೆ ಮತ್ತೊಂದು ಶಾಕ್: ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ ನೀರು ಬಿಡುವಂತೆ CWRC ಸೂಚನೆ: ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ರಾಜ್ಯಕ್ಕೆ ಬಿಗ್ ಶಾಕ್ ನೀಡಿದೆ. ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಸಮಿತಿ ಶಿಫಾರಸು ಮಾಡಿದೆ.

CWRC ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳೊಂದಿಗೆ ವರ್ಚುವಲ್ ಸಭೆ ನಡೆಸಿ, ಪ್ರತಿ ದಿನ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ಗಳಷ್ಟು ನೀರು ಹರಿಸಲು ತಿಳಿಸಿದೆ. ಸಮಿತಿಯ ಆದೇಶಕ್ಕೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಇದ್ದು, ರೈತರು ಬೆಳೆಗಳಿಗೆ ನೀರಲ್ಲದೇ ಸಂಕಷ್ಟದಲ್ಲಿದ್ದಾರೆ. ಇಂತಹ ಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದಿದೆ.

ಈ ಕುರಿತು, ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ನಮಗೆ ನೀರಿನ ಕೊರತೆ ಇದೆ, ನಾನು ಸಿಎಂ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ. ನ‌ಮಗೆ ಮಳೆ ಇಲ್ಲ, ವರ್ಷ ಪೂರ್ತಿ ಕುಡಿಯುವ ನೀರು ಬೇಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋಗುವ ಬಗ್ಗೆ ಚರ್ಚಿಸಿ ನಿರ್ಧಾರ ಮಾಡ್ತೀವಿ ಎಂದು ತಿಳಿಸಿದ್ದಾರೆ.

ತಮಿಳುನಾಡಿಗೆ 15 ದಿನಗಳ ಕಾಲ 4 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಶಿಫಾರಸು ಮಾಡುತ್ತಿದ್ದಂತೆ ಮಂಡ್ಯ ಜಿಲ್ಲೆಯಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆಗಳಲ್ಲಿ ಉರುಳುಸೇವೆ ಮಾಡಿ ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಕುಡಿಯಲು ನೀರಿಲ್ಲ. ಬೆಳೆಗಳು ಒಣಗಿ ಹೋಗುತ್ತಿವೆ. ಭೀಕರ ಬರಗಾಲ ಎದುರಾಗಿರುವುದರಿಂದ ನೀರಿಗಾಗಿ ಜನ-ಜಾನುವಾರುಗಳು ಪರಿತಪಿಸುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಿ ಎಂದು ಹೇಳುವುದು ಯಾವ ನ್ಯಾಯ? ಈ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಉತ್ತರ ನೀಡಬೇಕು ರಾಜ್ಯದ ರೈತರ ಹಿತ ಕಾಯಬೇಕು. ರಕ್ತ ಕೊಟ್ಟರೂ ನೀರು ಕೊಡಲ್ಲ ಎಂಬ ಸಂದೇಶ ರವಾನಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.


Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ