LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ಇಲಾಖೆ ಸೇರಬಯಸುವವರಿಗೆ ಗುಡ್ ನ್ಯೂಸ್: 3,991 ಸಿವಿಲ್ ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ KEA ಮುಖ್ಯ ಮಾಹಿತಿ | Police Recruitment

ಬೆಂಗಳೂರು: ಒಟ್ಟು 3,991 Police Constable(Civil) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 10ರಿಂದ ಆರಂಭವಾಗಲಿದೆ.

ಆ ವೇಳೆಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್ಸಿ-ಎ, ಎಸ್ಸಿ-ಬಿ ಮತ್ತು ಎಸ್ಸಿ-ಸಿ ಜಾತಿ ಪ್ರಮಾಣ ಪತ್ರಗಳ RD ಸಂಖ್ಯೆ ನಮೂದಿಸುವುದು ಕಡ್ಡಾಯ.

ಇದಲ್ಲದೆ, ಗ್ರಾಮೀಣ, ಕನ್ನಡ ಮಾಧ್ಯಮ ವ್ಯಾಸಂಗ ಇತ್ಯಾದಿ ಕ್ಲೇಮ್ ಮಾಡುವವರು ಅಗತ್ಯ ನಮೂನೆಗಳಲ್ಲಿ ಪ್ರಮಾಣ ಪತ್ರಗಳನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗ್ರಾಮೀಣ ಕೋಟಾ ಕ್ಲೇಮ್ ಮಾಡಬಯಸಿದರೆ ಕಡ್ಡಾಯವಾಗಿ Non creamy layer ಸರ್ಟಿಫಿಕೇಟ್ ಹೊಂದಿರಬೇಕು.

ಇದಲ್ಲದೆ, ಅರ್ಜಿ ಜತೆ ಅಪ್ ಲೋಡ್ ಮಾಡುವ ಚಿತ್ರ ಮತ್ತು ಸಹಿ 50kb ಒಳಗಿರಬೇಕು.

ಒಟ್ಟು ಹುದ್ದೆಗಳಲ್ಲಿ 596 ಹುದ್ದೆಗಳು HK ಹಾಗೂ 3,395 ಹುದ್ದೆಗಳು Non- HK ಕೋಟಾದಡಿ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನ.

ವಿವರಗಳಿಗೆ kea ವೆಬ್ ಸೈಟ್ ನೋಡಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ