LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಮೆಡ್ -ಕೆ ಪರೀಕ್ಷೆಯಲ್ಲಿ ಅಕ್ರಮ: 36 ಅಭ್ಯರ್ಥಿಗಳು ಅಮಾನತು

ಬೆಂಗಳೂರು: ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳು ಒಕ್ಕೂಟ(ಕಾಮೆಡ್ –ಕೆ) ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಜಾರ್ಖಂಡ್ ಜೆಮ್ ಷೆಡ್ ಪುರದ ಮೂರು ಪರೀಕ್ಷಾ ಕೇಂದ್ರಗಳ 36 ಅಭ್ಯರ್ಥಿಗಳನ್ನು ಅಮಾನತುಗೊಳಿಸಲಾಗಿದೆ.

ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಆಡಳಿತ ಮಂಡಳಿ ಕೋಟಾ ಸೀಟುಗಳ ಪ್ರವೇಶಕ್ಕೆ ದೇಶಾದ್ಯಂತ ಮೇ 9ರಂದು ನಡೆಸಲಾಗಿದ್ದ ಕಾಮೆಡ್ -ಕೆ 2026 ಪರೀಕ್ಷೆಯ ವೇಳೆ ಜೆಮ್ ಷೆಡ್ ಪುರದ 3 ಕೇಂದ್ರಗಳಲ್ಲಿ ಅಕ್ರಮ ನಡೆಸಿರುವುದು ಸಾಬೀತಾಗಿದ್ದು, 36 ಅಭ್ಯರ್ಥಿಗಳನ್ನು ಕೌನ್ಸೆಲಿಂಗ್ ನಿಂದ ಅಮಾನತು ಮಾಡಲಾಗಿದೆ.

ಕಾಮೆಡ್ -ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಎಸ್. ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಣೆಯ ನಂತರ ಕಾಮೆಡ್ -ಕೆ ನಡೆಸುವ ಸಮಗ್ರ ಶೈಕ್ಷಣಿಕ, ಆಡಳಿತಾತ್ಮಕ ಮತ್ತು ವಿಧಿ ವಿಜ್ಞಾನ ಲೆಕ್ಕಪರಿಶೋಧನೆ ಸಮಯದಲ್ಲಿ ಜೆಮ್ ಷೆಡ್ ಪುರ ಕೇಂದ್ರಗಳಲ್ಲಿ ಕೆಲವು ಲೋಪಗಳು ಕಂಡುಬಂದಿದ್ದವು. ಬಳಿಕ ಈ ಸಂಬಂಧ ವಿವರವಾದ ಪರಿಶೀಲನೆ ನಡೆಸಿದಾಗ ಕೆಲವು ಅಭ್ಯರ್ಥಿಗಳು ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವುದು, ಇದಕ್ಕೆ ಕೆಲವು ಸಿಬ್ಬಂದಿ ಸಹಕರಿಸಿರುವುದು ದೃಢಪಟ್ಟಿದೆ. ಹೀಗಾಗಿ 36 ಅಭ್ಯರ್ಥಿಗಳನ್ನು ಅಮಾನತು ಮಾಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ