LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಸಿಕ 4 ಸಾವಿರ ರೂ. ಶಿಷ್ಯವೇತನ ಸಹಿತ ನ್ಯಾಯಾಂಗ ಆಡಳಿತದಲ್ಲಿ ತರಬೇತಿ

ಮಡಿಕೇರಿ: ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2026-27ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.    

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ತರಬೇತಿ ಪಡೆಯಲು ವರ್ಗ- 1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಒಳಪಟ್ಟಿರಬೇಕು.

ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 2 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು, ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು.

ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು. ಕಾನೂನು ತರಬೇತಿಯು 04 ವರ್ಷಗಳ ಅವಧಿಯಾಗಿದ್ದು ಮಾಸಿಕ ರೂ.4 ಸಾವಿರ ಶಿಷ್ಯವೇತನ ನೀಡಲಾಗುವುದು. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯಿಂದ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ನೀಡಲು ಅವಕಾಶವಿದೆ. ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಗೆ ಹೋಗುವ ಮುನ್ನ, ತರಬೇತಿ ಮಧ್ಯದಲ್ಲಿ ಬಿಟ್ಟಲ್ಲಿ ತರಬೇತಿ ವೆಚ್ಚಕ್ಕೆ ಶೇ.10 ರಂತೆ ಬಡ್ಡಿ ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು ರೂ.100 ರ ಛಾಪಾ ಕಾಗದಲ್ಲಿ ಬರೆದುಕೊಡತಕ್ಕದ್ದು.

ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯಿಂದ ಪಡೆದು ಜೂನ್, 12 ರೊಳಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಹಾಗೂ ದೂರವಾಣಿ ಸಂಖ್ಯೆ 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕಪ್ರತಿಭಟನೆ ಹೆಸರಲ್ಲಿ ಬಿಜೆಪಿಯದ್ದು ಸದಾರಮೆ ನಾಟಕ: ಆರ್.ಅಶೋಕ್‌ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿBREAKING: 'KPSC ರದ್ದು' ಮಾಡಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಮನವಿ: ಸಚಿವ ಈಶ್ವರ ಖಂಡ್ರೆBREAKING: ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಬೆಸ್ಕಾಂ: ಈ ನಿಯಮಗಳ ಪಾಲನೆ ಕಡ್ಡಾಯಗಣೇಶ ತುಳಸಿಗೆ ಕೊಟ್ಟ ಶಾಪದ ಕತೆ ಇದು!