LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರದಿಂದ ಜಲಸಂಪನ್ಮೂಲ ಇಲಾಖೆಯ 4 ನಿಗಮಗಳಿಗೆ ₹2,421 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ಪ್ರಮುಖ ನಾಲ್ಕು ನಿಗಮಗಳ ವಿವಿಧ ಆಡಳಿತಾತ್ಮಕ ಹಾಗೂ ಅಭಿವೃದ್ಧಿ ವೆಚ್ಚಗಳಿಗಾಗಿ ಬರೋಬ್ಬರಿ ₹2,421 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆಯವ್ಯಯದಲ್ಲಿ (ಬಜೆಟ್) ಘೋಷಿಸಿದಂತೆ ಈ ಮುಂಗಡ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಅನುದಾನ ಪಡೆದ 4 ನಿಗಮಗಳು:

ರಾಜ್ಯದ ನೀರಾವರಿ ಹಾಗೂ ಮೂಲಸೌಕರ್ಯ ಜಾಲವನ್ನು ನಿರ್ವಹಿಸುವ ಈ ಕೆಳಗಿನ ಪ್ರಮುಖ ನಿಗಮಗಳಿಗೆ ಈ ಮೊತ್ತವನ್ನು ಹಂಚಿಕೆ ಮಾಡಲಾಗಿದೆ:

  1. ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (KBJNL)

  2. ಕರ್ನಾಟಕ ನೀರಾವರಿ ನಿಗಮ ನಿಯಮಿತ (KNNL)

  3. ಕಾವೇರಿ ನೀರಾವರಿ ನಿಗಮ ನಿಯಮಿತ (CNNL)

  4. ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ (VJNL)

ಯಾವೆಲ್ಲಾ ವೆಚ್ಚಗಳಿಗೆ ಅನುದಾನ ಬಳಕೆ?

ಬಿಡುಗಡೆಯಾಗಿರುವ ₹2,421 ಕೋಟಿ ಅನುದಾನವನ್ನು ನಿಗಮಗಳ ನೌಕರರ ವೇತನ ಪಾವತಿ, ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಬಾಕಿ ಭೂಸ್ವಾಧೀನ ಪ್ರಕ್ರಿಯೆ, ಪರಿಹಾರ ವಿತರಣೆ ಹಾಗೂ ನಿಗಮಗಳ ಕಚೇರಿಗಳ ದೈನಂದಿನ ನಿರ್ವಹಣಾ ವೆಚ್ಚಗಳು ಸೇರಿದಂತೆ ವಿವಿಧ ಆದ್ಯತೆಯ ಕಾರ್ಯಗಳಿಗೆ ಬಳಸಿಕೊಳ್ಳಲು ಸೂಚಿಸಲಾಗಿದೆ.

ಗುತ್ತಿಗೆದಾರರ ಬಾಕಿ ಬಿಲ್‌ಗೆ ಅನ್ವಯವಿಲ್ಲ:

ಪ್ರಮುಖವಾಗಿ, ಈ ಅನುದಾನವು ಗುತ್ತಿಗೆದಾರರ ಬಾಕಿ ಬಿಲ್ ಪಾವತಿಯನ್ನು ಹೊರತುಪಡಿಸಿ, ಕೇವಲ ಸಿಬ್ಬಂದಿ ವೆಚ್ಚ, ಭೂಸ್ವಾಧೀನ ಹಾಗೂ ಇಲಾಖಾ ಆಡಳಿತಾತ್ಮಕ ವೆಚ್ಚಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಸರ್ಕಾರದ ಈ ಕ್ರಮದಿಂದಾಗಿ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಭೂಸ್ವಾಧೀನ ಪ್ರಕ್ರಿಯೆಗಳು ಚುರುಕುಗೊಳ್ಳಲಿದ್ದು, ನಿಗಮಗಳ ನೌಕರರ ವೇತನ ಸಮಸ್ಯೆಗೂ ಪರಿಹಾರ ದೊರೆತಂತಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!