LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

4 ವರ್ಷದ ಪುಟ್ಟ ಕಂದನ ಮೇಲೆ ಲೈಂಗಿಕ ದೌರ್ಜನ್ಯ: 85 ವರ್ಷದ ವೃದ್ಧ ಅರೆಸ್ಟ್‌ !

ನಾಲ್ಕು ವರ್ಷದ ಮುಗ್ಧ ಬಾಲಕಿಯೊಬ್ಬಳ ಮೇಲೆ 85 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಡೊಂಬಿವಲಿಯಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ವೃದ್ಧ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳವಾರ ಈ ಘಟನೆ ನಡೆದಿದ್ದು, ತಾಯಿ ಮನೆಯ ಕೆಲಸದಲ್ಲಿ ನಿರತರಾಗಿದ್ದ ಸಮಯದಲ್ಲಿ ಬಾಲಕಿ ಮನೆಯ ಎದುರು ಆಟವಾಡುತ್ತಿದ್ದಳು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ನೆರೆಮನೆಯ ವೃದ್ಧ, ಆಕೆಯನ್ನು ನಯವಾಗಿ ಮಾತನಾಡಿ ತನ್ನ ಮನೆಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಸ್ವಲ್ಪ ಸಮಯದ ನಂತರ ಮಗು ಕಾಣೆಯಾಗಿರುವುದನ್ನು ಗಮನಿಸಿದ ತಾಯಿ, ಆತಂಕಗೊಂಡು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ.

ಕೊನೆಗೆ ನೆರೆಮನೆಯ ವೃದ್ಧನ ಮನೆಯ ಒಳಗೆ ಮಗು ಇರುವುದನ್ನು ಗಮನಿಸಿದ ತಾಯಿ, ಕೂಡಲೇ ಆಕೆಯನ್ನು ರಕ್ಷಿಸಿ ತನ್ನ ಮನೆಗೆ ಕರೆತಂದಿದ್ದಾರೆ. ನಂತರ ಮಗುವಿನಿಂದ ಮಾಹಿತಿ ಪಡೆದ ಪೋಷಕರು ತಕ್ಷಣವೇ ಸ್ಥಳೀಯ ರಾಮನಗರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75(2) ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ (ಪೋಕ್ಸೋ) ಸೆಕ್ಷನ್ 8 ರ ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ 85 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಮಾನವೀಯ ಘಟನೆಗಳು ಮರುಕಳಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜುಲೈ ತಿಂಗಳಿನಲ್ಲಿ ರಾಯಗಡ ಜಿಲ್ಲೆಯ ಪೆನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಹತ್ಯೆ ಮಾಡಿದ್ದ ಪ್ರಕರಣವೊಂದು ನಡೆದಿತ್ತು. ಇದೀಗ ಡೊಂಬಿವಲಿಯಲ್ಲಿ ನಡೆದಿರುವ ಈ ಘಟನೆ ಸಣ್ಣ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರಲ್ಲಿ ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ದಕ್ಷಿಣ ಕನ್ನಡ ಜಿಲ್ಲೆ ಇನ್ಮುಂದೆ 'ಮಂಗಳೂರು ಜಿಲ್ಲೆ': ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರBIG BREAKING: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ವಕೀಲರ ನಿಯೋಗದಿಂದ ಮನವಿ ಸಲ್ಲಿಕೆKPSC ನೇಮಕಾತಿ ಅಕ್ರಮದ ಜಾಲ ಭೇದಿಸಿದ CID: 13 ಬೇನಾಮಿ ಖಾತೆಗಳಲ್ಲಿದ್ದ 67 ಲಕ್ಷ ಸೀಜ್!BREAKING : ನಟ ದರ್ಶನ್ ಗೆ ಬಿಗ್ ರಿಲೀಫ್ : ಕ್ರಾಸ್ ಎಕ್ಸಾಮಿನೇಷನ್ ವೇಳೆ, ಖುದ್ದು ಹಾಜರಾತಿಗೆ ಅನುಮತಿ ನೀಡಿದ ಹೈಕೋರ್ಟ್ತೆರವುಗೊಳಿಸಿದ್ದ ಫುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ್ರೆ FIR, ಸಾಮಗ್ರಿ ಜಪ್ತಿ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆಕರ್ನಾಟಕ 'SSLC ಅರ್ಧವಾರ್ಷಿಕ ಪರೀಕ್ಷೆ'ಯ ವೇಳಾಪಟ್ಟಿ ಪ್ರಕಟ | Karnataka SSLC Examಮಂಗಳೂರಿನಲ್ಲಿಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿ ಜನರ ಚಿತ್ತ ಸರ್ಕಾರದ ನಿರ್ಧಾರಗಳತ್ತಬರಪೀಡಿತ ತಾಲೂಕುಗಳ ರೈತರಿಗೆ ಬಿಗ್ ರಿಲೀಫ್: ಸಾಲ ಮರುಪಾವತಿಗೆ 12 ತಿಂಗಳ ಕಾಲಾವಕಾಶಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಿಎಂ ಡಿಕೆಶಿ ಹೊಸ ಮಿಷನ್ : 50,000 ನಿವೇಶನ, ಕಲಬುರಗಿಯಲ್ಲಿ ಐಇ ಪಾರ್ಕ್.!