LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇರಳಂನಲ್ಲಿ ಶಿಗೆಲ್ಲಾ ವೈರಸ್ ಅಟ್ಟಹಾಸ: 440ಕ್ಕೂ ಹೆಚ್ಚು ಜನರಿಗೆ ಸೋಂಕು ಶಂಕೆ

ತಿರುವನಂತಪುರಂ: ಕೇರಳಂನಲ್ಲಿ ಮತ್ತೊಂದು ಮಾರಣಾಂತಿಕ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಆತಂಕ ಹೆಚ್ಚಿಸಿದೆ. ಶಿಗೆಲ್ಲಾ ಎಂಬ ಸೋಂಕು 4 ವರ್ಷದ ಮಗುವನ್ನು ಬಲಿಪಡೆದಿದ್ದು, 440 ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ ಎನ್ನಲಾಗುತ್ತಿದೆ.

ಕೇರಳಂ ನ ವಯನಾಡ್​, ಕೋಯಿಕ್ಕೋಡ್​ ಜಿಲ್ಲೆಗಳಲ್ಲಿ ಶಿಗೆಲ್ಲಾ ಸೋಂಕು ವ್ಯಾಪಿಸಿದೆ. ವಯನಾಡ್​ ಜಿಲ್ಲೆಯ ಸುಲ್ತಾನ್ ಬತ್ತೇರಿ ವ್ಯಾಪ್ತಿಯ ನೆನ್ಮೇನಿ ಪಂಚಾಯತ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಿಗೆಲ್ಲಾ ಸೋಂಕು ಹರಡಿದೆ. ಈ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಜಂಟಿಯಾಗಿ ಹೈ ಅಲರ್ಟ್ ಘೋಷಿಸಿವೆ. ನೂರಾರು ಜನರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ತೆಚ್ಚರ ವಹಿಸಲಾಗಿದೆ.

ಕಳೆದ ವಾರ ಸುಲ್ತಾನ್ ಬತ್ತೇರಿಯ ಶಾಲೆಯೊಂದರ ವಿದ್ಯಾರ್ಥಿಗಳಲ್ಲಿ ವಾಂತಿ, ಭೇದಿ ಮತ್ತು ಜ್ವರ ಕಾಣಿಸಿಕೊಂಡಾಗ ಈ ಸೋಂಕು ಮೊದಲ ಬಾರಿಗೆ ಬೆಳಕಿಗೆ ಬಂದಿತು. ವೈದ್ಯಕೀಯ ತಪಾಸಣೆಯಲ್ಲಿ ಇಬ್ಬರು ಮಕ್ಕಳಿಗೆ ಶಿಗೆಲ್ಲಾ ಸೋಂಕು ಇರುವುದು ದೃಢಪಟ್ಟಿದೆ. ಇದಾದ ಬಳಿಕ 337 ವಿದ್ಯಾರ್ಥಿಗಳು ಸೇರಿ ಒಟ್ಟು 443 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ 68 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ 26 ಜನರು ಬತ್ತೇರಿ ತಾಲೂಕು ಆಸ್ಪತ್ರೆಯಲ್ಲಿದ್ದಾರೆ. ಉಳಿದ 42 ಜನರು ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ, 14 ಜನರಲ್ಲಿ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆಯು ಒಟ್ಟು 163 ಜನರನ್ನು ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದೆ.

ಸೋಂಕು ಹರಡುವುದನ್ನು ತಡೆಯಲು ಶಾಲೆಗಳು, ಆಸ್ಪತ್ರೆಗಳು ಮತ್ತು ಮನೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪಾಲಿಸಲು ಸರ್ಕಾರ ಸೂಚಿಸಿದೆ. ಕೆಲವು ಮಕ್ಕಳಲ್ಲಿ ರೋಗಲಕ್ಷಣಗಳು ಮರುಕಳಿಸುತ್ತಿದ್ದು, ಆಸ್ಪತ್ರೆಗಳಿಗೆ ಮರು ದಾಖಲಾಗುತ್ತಿದ್ದಾರೆ. ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಿಗಳ ದಾಸ್ತಾನು ಇಟ್ಟುಕೊಳ್ಳಲು ಆದೇಶಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ