LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಇಂದಿನಿಂದ ಜು.1 ರವರೆಗೆ ಪಲ್ಸ್ ಪೋಲಿಯೋ: 65 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ

ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಅಂಗವಾಗಿ ಜೂನ್ 28 ರಿಂದ ಜುಲೈ 1ರವರೆಗೆ ರಾಜ್ಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಉದ್ದೇಶಿಸಲಾಗಿದೆ.

ಆರೋಗ್ಯ ಇಲಾಖೆ ಜೂನ್ 28 ರಂದು ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಂಡಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ರಾಜ್ಯದಾದ್ಯಂತ 5 ವರ್ಷದೊಳಗಿನ 64.84 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ಪೋಲಿಯೋ ಹನಿ ವಿತರಣೆಗಾಗಿ 36,076 ಬೂತ್ ಗಳನ್ನು ಗುರುತಿಸಲಾಗಿದೆ. ಗುಡ್ಡಗಾಡು ಪ್ರದೇಶಗಳನ್ನು ತಲುಪಲು 988 ತಂಡಗಳನ್ನು ರಚಿಸಲಾಗಿದೆ. 2125 ಟ್ರಾನ್ಸಿಟ್ ತಂಡಗಳು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ನೀಡಲಿವೆ. ಈ ಕಾರ್ಯಕ್ರಮಕ್ಕೆ 1.14 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದ್ದು, 7197 ಮೇಲ್ವಿಚಾರಕರನ್ನು ನೇಮಿಸಲಾಗಿದೆ.

ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್ ಗಳು, ಆಸ್ಪತ್ರೆಗಳು, ನಗರ ಕುಟುಂಬ ಕಲ್ಯಾಣ ಕೇಂದ್ರಗಳು, ಔಷಧಾಲಯಗಳು, ಅಂಗನವಾಡಿ ಕೇಂದ್ರ, ಶಾಲೆಗಳಲ್ಲಿ ಪೊಲೀಯೋ ಬೂತ್ ಗಳನ್ನು ಸ್ಥಾಪಿಸಲಾಗಿದೆ. ಅದೇ ರೀತಿ ಬಸ್ ನಿಲ್ದಾಣ, ರೈಲು ನಿಲ್ದಾಣ, ಸ್ವಯಂ ಸೇವಾ ಸಂಸ್ಥೆಗಳ ಆಸ್ಪತ್ರೆಗಳು, ಮಾಲ್ ಗಳು, ಖಾಸಗಿ ನರ್ಸಿಂಗ್ ಹೋಂಗಳು, ವೈದ್ಯಕೀಯ ವಿವಿ, ಪ್ರಮುಖ ಉದ್ಯಾನವನಗಳು, ಜನನಿಬಿಡ ಸ್ಥಳಗಳಲ್ಲಿ ಸ್ಥಿರ ಮತ್ತು ಸಂಚಾರಿ ತಂಡಗಳನ್ನು ಕೂಡ ನಿಯೋಜಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ