LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫ್ಲಿಪ್‌ಕಾರ್ಟ್‌, ಅಮೆಜಾನ್‌, ಮೀಶೋಗೆ ಬಿಗ್ ಶಾಕ್ ; 5.11 ಲಕ್ಷಕ್ಕೂ ಅಧಿಕ ಗ್ರಾಹಕರಿಂದ ದೂರುಗಳು!

ನವದೆಹಲಿ: ಭಾರತದಲ್ಲಿ ಇ-ಕಾಮರ್ಸ್ ಹಾಗೂ ಕ್ವಿಕ್ ಕಾಮರ್ಸ್ ಸೇವೆಗಳು ವ್ಯಾಪಕವಾಗಿ ಬೆಳೆಯುತ್ತಿರುವ ಬೆನ್ನಲ್ಲೇ, ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್‌ಗಳ ವಿರುದ್ಧ ನ್ಯಾಷನಲ್ ಕನ್ಸ್ಯೂಮರ್ ಹೆಲ್ಪ್‌ಲೈನ್‌ (NCH)ಗೆ ಭಾರೀ ಸಂಖ್ಯೆಯಲ್ಲಿ ಗ್ರಾಹಕರ ದೂರುಗಳು ದಾಖಲಾಗಿವೆ.

ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರಮುಖ ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್‌ಗಳಾದ ಫ್ಲಿಪ್‌ಕಾರ್ಟ್‌, ಅಮೆಜಾನ್‌ ಮತ್ತು ಮೀಶೋ ವಿರುದ್ಧ ಹೆಚ್ಚಿನ ಸಂಖ್ಯೆಯಲ್ಲಿ ದೂರುಗಳು ದಾಖಲಾಗಿರುವುದು ಗಮನಾರ್ಹವಾಗಿದೆ. ಈ ಕುರಿತು ಕೇಂದ್ರ ಸಹಾಯಕ ಸಚಿವ ಬಿ.ಎಲ್. ವರ್ಮಾ ಅವರು ಸಂಸತ್ತಿಗೆ ನೀಡಿದ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.

ಕ್ವಿಕ್ ಕಾಮರ್ಸ್ ಮತ್ತು ಇ-ಕಾಮರ್ಸ್ ವಿಭಾಗಗಳಿಗೆ ಸಂಬಂಧಿಸಿದಂತೆ ಒಟ್ಟು 5.11 ಲಕ್ಷಕ್ಕೂ ಅಧಿಕ ದೂರುಗಳು ಸ್ವೀಕರಿಸಲಾಗಿವೆ ಎಂದು ಸಚಿವರು ತಿಳಿಸಿದ್ದಾರೆ. ನಿಯಮ ಉಲ್ಲಂಘಿಸಿದ 47 ಇ-ಕಾಮರ್ಸ್ ಸಂಸ್ಥೆಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಕ್ರಮ ಕೈಗೊಂಡಿದ್ದು, ಒಟ್ಟು ₹1.12 ಕೋಟಿ ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಯಾವ ಸಮಸ್ಯೆಗಳ ಬಗ್ಗೆ ಹೆಚ್ಚು ದೂರು?

ಗ್ರಾಹಕರಿಂದ ಬಂದ ದೂರುಗಳಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ವಿತರಿಸದಿರುವುದು ಪ್ರಮುಖ ಸಮಸ್ಯೆಯಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ 79,818 ದೂರುಗಳು ದಾಖಲಾಗಿವೆ.

ಇದರ ಜೊತೆಗೆ, ಆರ್ಡರ್ ಮಾಡಿದ ವಸ್ತುವಿನ ಬದಲು ಬೇರೆ ಉತ್ಪನ್ನ ಕಳುಹಿಸುವುದು, ರಿಪ್ಲೇಸ್‌ಮೆಂಟ್ ಅಥವಾ ರಿಟರ್ನ್ ನಿರಾಕರಿಸುವುದು, ಕಳಪೆ ಗುಣಮಟ್ಟದ ಅಥವಾ ಹಾನಿಗೊಳಗಾದ ವಸ್ತುಗಳನ್ನು ಕಳುಹಿಸುವುದು, ಸಮಯಕ್ಕೆ ಸರಿಯಾಗಿ ಹಣ ಮರುಪಾವತಿ ಮಾಡದಿರುವುದು, ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುವುದು ಮುಂತಾದ ಸಮಸ್ಯೆಗಳ ಬಗ್ಗೆಯೂ ಗ್ರಾಹಕರು ದೂರು ನೀಡಿದ್ದಾರೆ.

ಗ್ರಾಹಕರಿಗೆ NCH ನೆರವು

ಇ-ಕಾಮರ್ಸ್ ಸಂಸ್ಥೆಗಳಿಂದ ಮೋಸಕ್ಕೊಳಗಾದ ಅಥವಾ ಸೂಕ್ತ ಸೇವೆ ಪಡೆಯದ ಗ್ರಾಹಕರು ನೇರವಾಗಿ ನ್ಯಾಯಾಲಯದ ಮೊರೆ ಹೋಗುವ ಅಗತ್ಯವಿಲ್ಲದೆ, ಪೂರ್ವ-ವಿಚಾರಣಾ ಹಂತದಲ್ಲೇ (Pre-litigation stage) ಸಮಸ್ಯೆಗೆ ಪರಿಹಾರ ಪಡೆಯಲು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು ನ್ಯಾಷನಲ್ ಕನ್ಸ್ಯೂಮರ್ ಹೆಲ್ಪ್‌ಲೈನ್ (NCH) ವ್ಯವಸ್ಥೆಯನ್ನು ಜಾರಿಗೆ ತಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ