LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕ್ರೀಡೆ, ರಕ್ಷಣೆ, ಎನ್.ಸಿ.ಸಿ. ಇತ್ಯಾದಿ ವಿಶೇಷ ವರ್ಗಗಳ ಕ್ಲೇಮ್ ಗೆ ಮೇ 5ರಿಂದ 15ರವರೆಗೆ ಮೂಲ ದಾಖಲೆ ಸಲ್ಲಿಸಿ

ಪ್ರಸಕ್ತ ಸಾಲಿನ ಸಿಇಟಿ ಅರ್ಜಿಯಲ್ಲಿ ಕ್ರೀಡೆ, ರಕ್ಷಣೆ, ಎನ್ ಸಿಸಿ ಇತ್ಯಾದಿ ವಿಶೇಷ ವರ್ಗಗಳನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಮೇ 5ರಿಂದ 15ರವರೆಗೆ ತಮ್ಮ ಮೂಲ ದಾಖಲೆಗಳನ್ನು ವೇಳಾಪಟ್ಟಿ ಪ್ರಕಾರ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವ್ಯವಸ್ಥೆ ಮಾಡಿದೆ.

ಪ್ರತಿದಿನ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿನ ಕೆಇಎ ಕಚೇರಿಗೆ ಬಂದು ಮೂಲ ದಾಖಲೆ ಹಾಗೂ ಎರಡು ಸೆಟ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.

ಮೇ 5ರಿಂದ 7ರವರೆಗೆ ಕ್ರೀಡಾ ಕೋಟಾದ ಅಭ್ಯರ್ಥಿಗಳು ದಾಖಲೆ ಸಲ್ಲಿಸಬೇಕು. ಸಿಎಪಿಎಫ್, ಸಿಆರ್ ಪಿಎಫ್, ಸಿಐಎಸ್ಎಫ್, ಬಿಎಸ್ಎಫ್, ಐಟಿಬಿಪಿ ಕ್ಲೇಮ್ ಮಾಡಿರುವವರು ಮೇ‌ 8 ರಂದು ಬರಬೇಕು. ಮಾಜಿ ಸೈನಿಕ/ಮಾಜಿ ಸಿಎಪಿಎಫ್ ಕ್ಲೇಮ್ ಮಾಡಿರುವವರು ಮೇ 9 ಮತ್ತು‌ 10ರಂದು ಹಾಗೂ ಡಿಫೆನ್ಸ್ ಕೋಟಾ ಕ್ಲೇಮ್ ಮಾಡಿರುವವರು ಮೇ 11 ಮತ್ತು 12ರಂದು ದಾಖಲೆ ಸಲ್ಲಿಸಬೇಕು. ಮೇ 13ರಂದು ಸ್ಕೌಟ್ಸ್ ಆ್ಯಂಡ್ ಗೈಡ್ಸ್/ ಆಂಗ್ಲೊ-ಇಂಡಿಯನ್ ಹಾಗೂ ಮೇ 14 ಮತ್ತು 15ರಂದು ಎನ್ ಸಿಸಿ ಕ್ಲೇಮ್ ಮಾಡಿರುವರು ದಾಖಲೆ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

20260421232212kannada.pdf https://share.google/YtmUxI9WvMAjrGPZ3

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ