LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ 6,000 ಕೋಟಿ ರೂ. ಹೂಡಿಕೆಗೆ ಆ್ಯಕ್ಸಿಸ್ ಕೇಡ್ಸ್ ಏರೊಸ್ಪೇಸ್ ಒಲವು: 20 ಸಾವಿರ ಪ್ರತ್ಯಕ್ಷ ಹಾಗೂ 54 ಸಾವಿರ ಪರೋಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು: ರಾಜ್ಯದಲ್ಲಿ 6,000 ಕೋಟಿ ರೂ. ಹೂಡಿಕೆಗೆ ಆ್ಯಕ್ಸಿಸ್ ಕೇಡ್ಸ್ ಏರೊಸ್ಪೇಸ್ ಒಲವು ತೋರಿದ್ದು, ಮೂರು ವರ್ಷಗಳಲ್ಲಿ ವೈಮಾಂತರಿಕ್ಷ, ರಕ್ಷಣಾ ಎಂ ಆರ್ ಒ ಹಾಗೂ ತಯಾರಿಕಾ ಕ್ಲಸ್ಟರ್ ಅಭಿವೃದ್ಧಿಪಡಿಸಲಾಗುವುದು. ಇದರಿಂದ 20 ಸಾವಿರ ಪ್ರತ್ಯಕ್ಷ ಹಾಗೂ 54 ಸಾವಿರ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿವೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದಲ್ಲಿ ಹೆಸರುವಾಸಿಯಾಗಿರುವ ಬೆಂಗಳೂರು ಮೂಲದ ಆ್ಯಕ್ಸಿಸ್ ಕೇಡ್ಸ್ ಏರೊಸ್ಪೇಸ್ ಇನ್ ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಉನ್ನತಾಧಿಕಾರಿಗಳೊಂದಿಗೆ ಸಚಿವ ಎಂ.ಬಿ. ಪಾಟೀಲ್ ಇಂದು ವಿಸ್ತೃತ ಸಭೆ ನಡೆಸಿದ್ದಾರೆ. ಈ ವೇಳೆ ಅವರು ರಾಜ್ಯದಲ್ಲಿ ₹6,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದರು.

200 ಎಕರೆ ಪ್ರದೇಶದಲ್ಲಿ ವೈಮಾಂತರಿಕ್ಷ, ರಕ್ಷಣಾ, ಸೆಮಿಕಂಡಕ್ಟರ್ ಹಾಗೂ ಕೃತಕ ಬುದ್ಧಿಮತ್ತೆ (AI) ನಾವೀನ್ಯತೆ ಕ್ಷೇತ್ರಗಳಲ್ಲಿ ಉತ್ಪಾದನೆ, ಪರೀಕ್ಷೆ ಮತ್ತು ನಿರ್ವಹಣೆಯ ಸಮಗ್ರ ಕೇಂದ್ರ ಸ್ಥಾಪಿಸುವುದು ಆ್ಯಕ್ಸಿಸ್ ಕೇಡ್ಸ್ ಏರೊಸ್ಪೇಸ್   ನ ಪ್ರಮುಖ ಉದ್ದೇಶವಾಗಿದೆ. ಜೊತೆಗೆ (R&D) ಕೇಂದ್ರವನ್ನೂ ಸ್ಥಾಪಿಸಲು ಮುಂದಾಗಿದೆ.

ಕಂಪನಿಯು ಹಂತ ಹಂತವಾಗಿ ಒಟ್ಟು ₹6,000 ಕೋಟಿ ಬಂಡವಾಳ ಹೂಡಿಕೆ ಮಾಡಲಿದ್ದು, ಇದರಿಂದ ರಾಜ್ಯದಲ್ಲಿ ಪ್ರತ್ಯಕ್ಷವಾಗಿ 20 ಸಾವಿರ ಹಾಗೂ ಪರೋಕ್ಷವಾಗಿ 54 ಸಾವಿರ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿದೆ.

ಕ್ಷಿಪಣಿ ತಯಾರಿಕೆಗೆ ಪೂರಕ ಸೌಲಭ್ಯಗಳು, ರೇಡಾರ್ ಮತ್ತು ಸಂವೇದಕ ತಂತ್ರಜ್ಞಾನ, ಯುದ್ಧ ವಿಮಾನಗಳ ದುರಸ್ತಿ ಮತ್ತು ನಿರ್ವಹಣಾ ಸೌಲಭ್ಯಗಳು (MRO) ಸೇರಿದಂತೆ ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಕಂಪನಿ ವಿಶೇಷ ಆದ್ಯತೆ ನೀಡಲಿದೆ.

ಸಭೆಯಲ್ಲಿ ಆ್ಯಕ್ಸಿಸ್ ಕೇಡ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶಾರಧಿ ಚಂದ್ರ ಬಾಬು, ನಿರ್ದೇಶಕ ಸುರೇಶ್ ಕುಮಾರ್, ಪ್ರಧಾನ ವ್ಯವಸ್ಥಾಪಕ(ಪ್ರಾಜೆಕ್ಟ್ಸ್) ಎನ್.ಕೆ. ಸತೀಶ ಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎನ್. ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಖುಷ್ಬೂ ಗೋಯಲ್  ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ