LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ 6 ದಿನಗಳ ಕಾಲ 5 ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ: ಜಾಗತಿಕ ಬಿಕ್ಕಟ್ಟಿನ ನಡುವೆ ಮಹತ್ವ ಪಡೆದ ವಿಶ್ವ ನಾಯಕರ ಭೇಟಿ

ನವದೆಹಲಿ: ಪಶ್ಚಿಮ ಏಷ್ಯಾ ರಾಷ್ಟ್ರಗಳ ಸಂಘರ್ಷ ಹಾಗೂ ಜಾಗತಿಕ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 6 ದಿನಗಲ ಕಾಲ ಯುರೋಪಿಯನ್ ಹಾಗೂ ಗಾಲ್ಫ್ ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ.

ಯುದ್ಧದ ಸಂಘರ್ಷ, ಇಂಧನ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುತ್ತಿದ್ದು, ಪ್ರಧಾನಿ ಮೋದಿಯವರ ಈ ಪ್ರವಾಸ ಭಾರಿ ಮಹತ್ವ ಪಡೆದುಕೊಂಡಿದೆ.

ಇಂಧನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು, ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ವ್ಯಾಪಾರ ಅಡೆತಡೆಗಳಿಗೆ ಪರಿಹಾರ ಕಂಡುಕೊಳ್ಳುವುದು ಮತ್ತು ನಿರ್ಣಾಯಕ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಹೆಚ್ಚಿಸುವುದು ಈ ಪ್ರವಾಸದ ಪ್ರಮುಖ ಉದ್ದೇಶಗಳಾಗಿವೆ.

ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಹಲವು ವಿಶ್ವ ನಾಯಕರೊಂದಿಗೆ ಮಾತುಕತೆಗಳನ್ನು ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವ್ರು ಇಂದಿನಿಂದ ಮೇ 20ರ ವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರವಾಸದಲ್ಲಿರಲಿದ್ದಾರೆ. ವ್ಯಾಪಾರ, ತಂತ್ರಜ್ಞಾನ, ಇಂಧನ, ನಾವೀನ್ಯತೆ ಸೇರಿದಂತೆ ಇತರ ವಲಯಗಳಲ್ಲಿ ಭಾರತದ ಪಾಲುದಾರಿಕೆಗಳನ್ನು ಬಲಪಡಿಸುವ ಗುರಿಯನ್ನು ಮೋದಿ ಅವರ ಈ ಭೇಟಿ ಹೊಂದಿದೆ. ಈ ಮೂಲಕ ಯುರೋಪ್ ಮತ್ತು ಗಲ್ಫ್ ರಾಷ್ಟ್ರಗಳೊಂದಿಗೆ ಭಾರತದ ಸ್ನೇಹ ಮತ್ತಷ್ಟು ಬಲಗೊಳ್ಳಲಿದೆ.

ಇಂದು ಯುಎಇಯಲ್ಲಿ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಬಂಧಗಳು, ಇಂಧನ ಸಹಕಾರ ಮತ್ತು ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ. ಆ ಬಳಿಕ ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್​ಗೆ ತೆರಳಲಿದ್ದಾರೆ. ಈ ವೇಳೆ, ಅವರು ನಾರ್ಡಿಕ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಮಾಹಿತಿ ನೀಡಿದ್ದರು.

ನೆದರ್ಲ್ಯಾಂಡ್ಸ್ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ, ಅಲ್ಲಿನ ಪ್ರಧಾನಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಾರೆ ಎಂದು ಸಿಬಿ ಜಾರ್ಜ್ ತಿಳಿಸಿದ್ದಾರೆ. ಮೇ 17 ರಂದು ಸ್ವೀಡನ್‌ಗೆ ತೆರಳುವ ಪ್ರಧಾನಿ ಮೋದಿ ಗೋಥೆನ್‌ಬರ್ಗ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಹಾಗೂ ಸ್ವೀಡನ್​ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್, ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಕೈಗಾರಿಕೆಗಾಗಿ ಯುರೋಪಿಯನ್ ರೌಂಡ್ ಟೇಬಲ್ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಬಳಿಕ ನಾರ್ವೆಗೆ ತೆರಳಲಿದ್ದಾರೆ. ಕಳೆದ 43 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನಾರ್ವೆಗೆ ನೀಡುವ ಮೊದಲ ಭೇಟಿ ಇದಾಗಲಿದೆ. ಮೇ 19 ರಂದು ಓಸ್ಲೋದಲ್ಲಿ 3 ನೇ ಭಾರತ-ನಾರ್ಡಿಕ್ ಶೃಂಗಸಭೆ ನಡೆಯಲಿದ್ದು, ಡೆನ್ಮಾರ್ಕ್, ಫಿನ್‌ಲ್ಯಾಂಡ್, ಐಸ್‌ಲ್ಯಾಂಡ್, ನಾರ್ವೆ ಮತ್ತು ಸ್ವೀಡನ್‌ನ ನಾಯಕರು ಸಹ ಭಾಗವಹಿಸಲಿದ್ದಾರೆ.

ಬಳಿಕ ಪ್ರಧಾನಿ ಮೋದಿ ಅವರು ಮೇ 19 ಮತ್ತು 20 ರಂದು ಇಟಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ