LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಗಸ್ಟ್ 6 ಮತ್ತು 7ರಂದು ಖಾದಿ ಬಟ್ಟೆಗಳ ಮಾರಾಟ ಮಳಿಗೆ ಪ್ರಾರಂಭ

ಧಾರವಾಡ : ಧಾರವಾಡ ಜಿಲ್ಲೆ ಜಿಲ್ಲಾಧಿಕಾರಿಗಳವರ ನಿರ್ದೇಶನದ ಮೇರೆಗೆ ಖಾದಿ ಬಟ್ಟೆಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ತೆರೆಯಲು ಅವಕಾಶ ನೀಡಿದ್ದು, ಆಗಸ್ಟ್ 6 ಮತ್ತು 7, 2026 ರಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಖಾದಿ ಬಟ್ಟೆಗಳ ಮಾರಾಟ ಮಳಿಗೆಗಳನ್ನು ಪ್ರಾರಂಭಿಸಲಾಗಿದೆ.

ಈ ಮಾರಾಟ ಮಳಿಗೆಗಳು ಧಾರವಾಡ ಜಿಲ್ಲೆಯ ಅಧಿಕೃತ ಸಂಘ-ಸಂಸ್ಥೆಗಳಾದ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ (ಫೆ), ಬೆಂಗೇರಿ-ಹುಬ್ಬಳ್ಳಿ ಹಾಗೂ ಧಾರವಾಡ ತಾಲೂಕು ಗರಗ ಕ್ಷೇತ್ರೀಯ ಸೇವಾ ಸಂಘ, ಗರಗ ವತಿಯಿಂದ ಎರಡು ದಿನಗಳ ಕಾಲ ವಿವಿಧ ಬಗೆಯ ಗುಣಮಟ್ಟದ ಹಾಗೂ ವೈವಿಧ್ಯಮಯ ಖಾದಿ ಬಟ್ಟೆಗಳನ್ನು ಮಾರಾಟ ಮಾಡಲಾಗುತ್ತದೆ.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತಾತ್ಕಾಲಿಕ ಮಳಿಗೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ವಿವಿಧ ಇಲಾಖೆಗಳ ಎಲ್ಲಾ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಖಾದಿ ಮಾರಾಟ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ

ಧಾರವಾಡ : ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಆಹಾರಧಾನ್ಯಗಳನ್ನು ಪೂರೈಸುತ್ತಿದ್ದು, ಅದರಂತೆ ಅಗಸ್ಟ-2026 ನೇ ಮಾಹೆಯಲ್ಲಿ ಅಗಸ್ಟ-2026 ಹಾಗೂ ಸಪ್ಟಂಬರ-2026 ನೇ ಈ ಎರಡು ಮಾಹೆಗಳಿಗೆ ಸಂಬಂಧಿಸಿದಂತೆ, ಜಿಲ್ಲೆಯ ಅಂತ್ಯೋದಯ ಪಡಿತರ ಚೀಟಿ (ಪ್ರತಿ ಕಾರ್ಡಿಗೆ) 28 ಕೆಜಿ ಅಕ್ಕಿ ಮತ್ತು 42 ಕೆಜಿ ಜೋಳ ಒಟ್ಟು 70 ಕೆಜಿ ಆಹಾರಧಾನ್ಯ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಕೇಂದ್ರ ವರ್ಗದಡಿಯ ಪಡಿತರ ಕಾರ್ಡುಗಳಿಗೆ 4 ಕೆಜಿ ಅಕ್ಕಿ ಮತ್ತು 6 ಕೆಜಿ ಜೋಳ ಒಟ್ಟು 10 ಕೆಜಿ ಆಹಾರಧಾನ್ಯ ಹಾಗೂ ರಾಜ್ಯ ಆದತ್ಯಾ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಪಡಿತರ ಆಹಾರಧಾನ್ಯವನ್ನು ವಿತರಣೆ ಮಾಡಲಾಗುತ್ತದೆ. ಹಾಗೆಯೇ ರಾಜ್ಯ ಸರ್ಕಾರವು ತನ್ನ ಪಾಲಿನ ಎರಡು ತಿಂಗಳ ಅಕ್ಕಿಯನ್ನು ಸಪ್ಟಂಬರ-2026 ನೇ ಮಾಹೆಯಲ್ಲಿ ನೀಡಲಾಗುವುದು.

ಪ್ರಸ್ತುತ ಅಗಸ್ಟ-2026 ನೇ ಮಾಹೆಯಲ್ಲಿ ಕೇಂದ್ರ ವ್ಯಾಪ್ತಿ ಅಂದರೆ ಎನ್‍ಎಫ್‍ಎಸ್‍ಎ ವರ್ಗದಡಿ ಅಗಸ್ಟ ಮತ್ತು ಸಪ್ಟಂಬರ-2026 ಎರಡೂ ಮಾಹೆಗಳ ಪಡಿತರ ಆಹಾರಧಾನ್ಯವನ್ನು ವಿತರಿಸಲಾಗುತ್ತಿದ್ದು, ಎಲ್ಲ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಎರಡೂ ಮಾಹೆಗಳಿಗೆ ಸಂಬಂಧಿಸಿದಂತೆ ಮಾಹೆವಾರು ಪ್ರತ್ಯೇಕವಾಗಿ ಬೆರಳಚ್ಚು ನೀಡಿ ಉಚಿತವಾಗಿ ಪಡಿತರವನ್ನು ಪಡೆಯಬೇಕು. ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ 1967 ಸಹಾಯವಾಣಿ ಸಂಖ್ಯೆಯನ್ನು ಪ್ರದರ್ಶಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ