LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಂಕ್ ಗ್ರಾಹಕರೇ ಗಮನಿಸಿ: ಇಂದಿನಿಂದ 6 ದಿನ ದೇಶಾದ್ಯಂತ SBI ಬ್ಯಾಂಕಿಂಗ್ ಸೇವೆ ಸ್ಥಗಿತ ಸಾಧ್ಯತೆ

ನವದೆಹಲಿ: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಶಾಖೆಗಳು ದೇಶಾದ್ಯಂತ ಸತತ 5ರಿಂದ 6 ದಿನಗಳ ಕಾಲ ಬಂದ್ ಆಗುವ ಹಿನ್ನೆಲೆಯಲ್ಲಿ ಗ್ರಾಹಕರ ಬ್ಯಾಂಕಿಂಗ್ ವಹಿವಾಟುಗಳಿಗೆ ಅಡಚಣೆಯಾಗುವ ಸಂಭವವಿದೆ.

ಮೇ 23 ರಿಂದ 28 ರವರೆಗೆ ವಿವಿಧ ಕಾರಣಗಳಿಗೆ ಬ್ಯಾಂಕಿಂಗ್ ಸೇವೆ ಸ್ಥಗಿತವಾಗಲಿದೆ. ಮೇ 23ರಂದು ನಾಲ್ಕನೇ ಶನಿವಾರ ರಜೆ ಇರುತ್ತದೆ. ಮೇ 24 ರಂದು ಭಾನುವಾರ ಸಾರ್ವತ್ರಿಕ ರಜೆ ಕಾರಣಕ್ಕೆ ಬ್ಯಾಂಕ್ ಬಂದ್ ಆಗಲಿದೆ.

ನಂತರ ಮೇ 25 ಮತ್ತು 26ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎರಡು ದಿನ ಮುಷ್ಕರಕ್ಕೆ ಕರೆ ನೀಡಿದ್ದು, ಹೀಗಾಗಿ ಸೋಮವಾರ ಮತ್ತು ಮಂಗಳವಾರ ಬ್ಯಾಂಕ್ ಕಾರ್ಯ ಚಟುವಟಿಕೆಗಳು ಬಹುತೇಕ ಸ್ಥಗಿತವಾಗಲಿದೆ.

ಮೇ 27 ಮತ್ತು 28 ರಂದು ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ಬ್ಯಾಂಕಿಗೆ ರಜೆ ಇರುತ್ತದೆ. ದೇಶದ ಬೇರೆ ಬೇರೆ ಭಾಗಗಳಲ್ಲಿ ಬೇರೆ ಬೇರೆ ದಿನಗಳಂದು ಬಕ್ರಿದ್ ಆಚರಣೆ ನಡೆಯಲಿದೆ. ಹೀಗಾಗಿ ಕೆಲವು ಕಡೆ ಮೇ 27ರಂದು ಬ್ಯಾಂಕಿಗೆ ರಜೆ ಇದ್ದರೆ, ಮತ್ತೆ ಕೆಲವು ಕಡೆ ಮೇ 28ರಂದು ರಜೆ ನೀಡಲಾಗಿದೆ. ಹೀಗಾಗಿ ಮೇ 28 ರ ವರೆಗೂ ಬ್ಯಾಂಕಿಂಗ್ ಶಾಖೆಗಳಲ್ಲಿ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಎಟಿಎಂಗೆ ಹಣ ಭರ್ತಿ ಆಗದೇ ಹಣ ಹಿಂಪಡೆಯಲು ತೊಂದರೆಯಾಗಬಹುದು. ಆನ್ ಲೈನ್ ಸೇವೆಗಳು ಎಂದಿನಂತೆ ಲಭ್ಯವಿರುತ್ತವೆ ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ