LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ 7 ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ, ಸಿಡಿಲಿಗೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟಿಸಿದ್ದು, ಕೆಲವು ಕಡೆ ಭಾರೀ ಮಳೆಯ ಕಾರಣ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ

ಮಂಗಳೂರಿನಲ್ಲಿ ಭಾರೀ ಮಳೆಯ ಕಾರಣ ಹವಾಮಾನ ವೈಪರೀತ್ಯದಿಂದ ವಿಮಾನಗಳ ಲ್ಯಾಂಡಿಂಗ್ ಸಮಸ್ಯೆಯಾಗಿತ್ತು. ದಕ್ಷಿಣ ಕನ್ನಡ, ಉಡುಪಿ,  ಯಾದಗಿರಿ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಉತ್ತ ಕನ್ನಡ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

ವಿದ್ಯುತ್ ಕಂಬಗಳು, ಮರಗಳು ಧರೆಗೆ ಉರುಳಿ ಕೆಲವು ಕಡೆ ವಿದ್ಯುತ್ ಸ್ಥಗಿತಗೊಂಡಿತ್ತು. ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಮಳೆ ಮುನ್ಸೂಚನೆ ನೀಡಲಾಗಿದೆ.

ಇನ್ನು ರಾಜ್ಯದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಮುದಹದಡಿ ಗ್ರಾಮದಲ್ಲಿ ಕುರಿಗಾಹಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮರಡಿ ಗ್ರಾಮದ ಅಜಯ ದುಂಡಪ್ಪ ಗವನಾಳ(19) ಮೃತಪಟ್ಟವರು. ಕುರಿಗಳೊಂದಿಗೆ ವಲಸೆ ಬಂದಿದ್ದ ಅಜಯ್ ದುಂಡಪ್ಪ ಕುಟುಂಬ ಮುದಹದಡಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದು, ಮಳೆ ಆರಂಭವಾಗುತ್ತಿದ್ದಂತೆ ರಕ್ಷಣೆ ಪಡೆಯಲು ಅಜಯ್ ಮರದ ಅಡಿ ನಿಂತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆ ಕುಂದಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 66 ಅರಾಟೆ ಸೇತುವೆ ದುರಸ್ತಿ ವೇಳೆ ಸಿಡಿಲು ಬಡಿದು ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್(35) ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಲವಜೋತ್ ಸಿಂಗ್(28) ಗಾಯಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕಪ್ರತಿಭಟನೆ ಹೆಸರಲ್ಲಿ ಬಿಜೆಪಿಯದ್ದು ಸದಾರಮೆ ನಾಟಕ: ಆರ್.ಅಶೋಕ್‌ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿBREAKING: 'KPSC ರದ್ದು' ಮಾಡಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಮನವಿ: ಸಚಿವ ಈಶ್ವರ ಖಂಡ್ರೆBREAKING: ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಬೆಸ್ಕಾಂ: ಈ ನಿಯಮಗಳ ಪಾಲನೆ ಕಡ್ಡಾಯಗಣೇಶ ತುಳಸಿಗೆ ಕೊಟ್ಟ ಶಾಪದ ಕತೆ ಇದು!