LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಯಲ್ಲಿದ್ದ 7 ಲಕ್ಷ ರೂ. ನಗದು ಕಳವು: ಸಿಕ್ಕಿಬಿದ್ದ ಆರೋಪಿಗಳಿಂದ 5 ಲಕ್ಷ ರೂ. ಜಪ್ತಿ

ಶಿವಮೊಗ್ಗ: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 5.13 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.

  ದಿನಾಂಕ 26/05/2026 ರಂದು ಮದ್ಯಾಹ್ನ  12-30 ಪಿಎಂ ಗಂಟೆಯಿಂದ ಸಂಜೆ 04-30 ಪಿಎಂ ಗಂಟೆಯ ಸಮಯದಲ್ಲಿ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಪುರ ಲಕ್ಕಪ್ಪ ಲೇ ಔಟ್ 2ನೇ ಕ್ರಾಸ್ ನಲ್ಲಿರುವ ಒಂದು ಮನೆಯಲ್ಲಿ 7 ಲಕ್ಷ ನಗದು ಹಣ ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಪಿರ್ಯಾದುದಾರ ಹೆಚ್.ಎಲ್. ಸೋಮಶೇಖರ್ ದಿನಾಂಕ 27/05/2026 ರಂದು ರಾತ್ರಿ 10 ಗಂಟೆಗೆ ದೂರು ನೀಡಿದ್ದು, ವಿನೋಬನಗರ ಪೊಲೀಸ್ ಠಾಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

 ಈ ಪ್ರಕರಣದಲ್ಲಿ ಕಳವು ಮಾಡಿಕೊಂಡು ಹೋದ ನಗದು ಹಣ ಮತ್ತು ಆರೋಪಿತರನ್ನು ಪತ್ತೆ ಮಾಡಲು ಎಸ್ಪಿ ನಿಖಿಲ್ ಬಿ., ಎಎಸ್ಪಿ ಕಾರಿಯಪ್ಪ ಎ.ಜಿ., ಡಿವೈಎಸ್ಪಿ ಸಂಜೀವ್ ಕುಮಾರ್ ಟಿ. ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನೀರಿಕ್ಷಕ ಸಂತೋಷಕುಮಾರ್ ಡಿ.ಕೆ. ಉಸ್ತುವಾರಿಯಲ್ಲಿ ಪಿಎಸ್ಐ ತಿರುಮಲೇಶ್ ಜಿ ಮತ್ತು ಸಿಬ್ಬಂದಿಗಳಾದ ರಾಜು ಕೆ.ಆರ್,, ಚಂದ್ರಾನಾಯ್ಕ ಬಿ., ಮಲ್ಲಪ್ಪ ಎಸ್.ಜಿ., ಅರುಣಕುಮಾರ್ ಎನ್.ಕೆ., ಮನುಶಂಕರ ಅವರ ತಂಡ ರಚಿಸಿದ್ದರು.

ಆರೋಪಿತರ ಪತ್ತೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿತರಾದ ಶಿವಮೊಗ್ಗ ಟಿಪ್ಪುನಗರದ ಮೊಹಮದ್ ಸಲೀಮ್(27), ಮೊಹಮದ್ ರಜಾಕ್(26) ಅವರುಗಳನ್ನು ಬಂಧಿಸಿ ಅವರು ಕಳವು ಮಾಡಿಕೊಂಡು ಹೋದ 5,13,000- ರೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ