LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 7 ಸಾವಿರ ಪೊಲೀಸ್, ಕೃಷಿ ಇಲಾಖೆಯ 945 ಹುದ್ದೆ ಸೇರಿ 12 ಸಾವಿರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ವೃಂದಗಳ 11,938 ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸಿದ್ಧತೆ ಮಾಡಿಕೊಂಡಿದೆ.

ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಪಾರದರ್ಶಕತೆಯಿಂದ ತ್ವರಿತಗತಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕಾರಣಕ್ಕೆ ಬಹುತೇಕ ಇಲಾಖೆಗಳು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು KPSC ಬದಲಾಗಿ ಕೆಇಎ ಬಗ್ಗೆ ಆಸಕ್ತಿ ತೋರಿಸಿವೆ.

 3991 ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, 1600 ಸಿಎಎಆರ್/ಡಿಎಆರ್ ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್, 1687 ರಾಜ್ಯ ಮೀಸಲು ಪೊಲೀಸ್ ಪಡೆ(KSRP) ಸೇರಿದಂತೆ ಗೃಹ ಇಲಾಖೆಯ ವಿವಿಧ ವೃಂದಗಳ 7813 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿವಿಧ ವೃಂದಗಳ 1320, ವಾಣಿಜ್ಯ ತೆರಿಗೆ ಇಲಾಖೆಯ 706 ಹುದ್ದೆಗಳು ಸೇರಿದಂತೆ ಉಳಿಕೆ ಮೂಲ ವೃಂದಗಳ 9244, ಕಲ್ಯಾಣ ಕರ್ನಾಟಕ ವೃಂದದ 2694 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿದೆ.

ಕೃಷಿ ಇಲಾಖೆಯ 945, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 386, ರಾಜ್ಯ ವಿಮಾ ಯೋಜನೆ ಇಲಾಖೆಯ 289, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ 200, ಪ್ರವಾಸೋದ್ಯಮ, ಕೈಮಗ್ಗ ಮತ್ತು ಜವಳಿ, ಕಾಡಾ ನಿರ್ದೇಶನಾಲಯ, ಕೆಆರ್ ಐಡಿಎಲ್, ಕೆಐಎಡಿಬಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಜೂನ್ 20ರವರೆಗೆ ವಿವಿಧ ಇಲಾಖೆಗಳಿಂದ ಸಲ್ಲಿಕೆಯಾದ ಎಲ್ಲಾ ನೇಮಕಾತಿ ಪ್ರಸ್ತಾವನೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ದಿನ, ತಾತ್ಕಾಲಿಕ ಮತ್ತು ಅಂತಿಮ ಕೀ ಉತ್ತರ ಪ್ರಕಟ, ಅಂಕ ಪ್ರಕಟ, ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ, ಆಯ್ಕೆ ಪಟ್ಟಿ ಪ್ರಕಟಣೆಗೆ ನಿಗದಿಪಡಿಸಿದ ದಿನಾಂಕಗಳ ಮಾಹಿತಿ ವೇಳಾಪಟ್ಟಿ ಸಿದ್ದಪಡಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳಿಗೆ ಸಲ್ಲಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ