LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲು

ನವದೆಹಲಿ: ಭಾರತದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಫಂಡಿಂಗ್ ಆರೋಪ ಕೇಳಿಬಂದಿದೆ. ಬೆಂಗಳೂರಿನಲ್ಲೂ ಹಣಕಾಸು ವಹಿವಾಟು ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕಾ ಮೂಲದ ಟಿಟಿಐ (ದಿ ತಿಮೋತಿ ಇನಿಶಿಯೇಟಿವ್) ಕ್ರಿಶ್ಚಿಯನ್ ಮಿಷಿನರಿ ಸಂಸ್ಥೆ ಹಾಗೂ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಯುಎಪಿಎ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ಒಳಸಂಚು, ವಂಚನೆ ಮತ್ತು ಸುಳ್ಳು ದಾಖಲೆ ಸೃಷ್ಟಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನ ಜೋನಾಥನ್ ಎಸ್ ರಾಜನ್, ಮೈಸೂರಿನ ಸುಪ್ರೀಂ ಜಾಯ್, ಮಿಕಾ ಮಾರ್ಕ್, ಅಜಿತ್ ವರ್ಗೀಸ್ ಮಥಾಯಿ, ಛತ್ತೀಸ್ ಘಟ್​ದ ವರ್ಗೀಸ್ ಚಾಕೊ, ಅಸ್ಸಾಂನ ಬಬ್ಲು ಕುರ್ಮಿ ಹಾಗೂ ಟಿಟಿಐ ಸಂಸ್ಥೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಳೆದ ಏಪ್ರಿಲ್‌ನಲ್ಲಿ ಇಡಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ 95 ಕೋಟಿ ರೂಪಾಯಿಗೂ ಅಧಿಕ ಅಕ್ರಮ ವಿದೇಶಿ ಹಣ ಬಳಕೆಯಾಗಿರುವುದು ಬೆಳಕಿಗೆ ಬಂದಿದ್ದು, ಸಂತೋಷ್ ಕುಮಾರ್ ಎಂಬ ಸುಳ್ಳು ಹೆಸರಿನ ಯುಎಸ್‌ಎ ಟ್ರೂಯಿಸ್ಟ್ ಬ್ಯಾಂಕ್‌ನ ಸಾವಿರಕ್ಕೂ ಹೆಚ್ಚು ವಿದೇಶಿ ಡೆಬಿಟ್ ಕಾರ್ಡ್‌ಗಳನ್ನು ಭಾರತದಲ್ಲಿ ಅಕ್ರಮವಾಗಿ ವಿತರಿಸಿ ಹಣ ಡ್ರಾ ಮಾಡಿರುವುದು ಪತ್ತೆಯಾಗಿತ್ತು.

ಆರೋಪಿಗಳಲ್ಲೊಬ್ಬನಾದ ಮಿಕಾ ಮಾರ್ಕ್ ಬಳಿ 24 ವಿದೇಶಿ ಡೆಬಿಟ್ ಕಾರ್ಡ್‌ಗಳು ಪತ್ತೆಯಾಗಿದ್ದು, ನಕ್ಸಲ್ ಪೀಡಿತ ಪ್ರದೇಶಗಳು ಸೇರಿದಂತೆ ಛತ್ತೀಸ್‌ಗಢದಲ್ಲಿ ಈ ಕಾರ್ಡ್‌ಗಳ ಮೂಲಕ ಶಂಕಾಸ್ಪದ ನಗದು ಚಟುವಟಿಕೆಗಳು ನಡೆದಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಮತ್ತೊಬ್ಬ ಆರೋಪಿ ಅಜಿತ್ ವರ್ಗೀಸ್ ವಿಚಾರಣೆ ವೇಳೆ ಬೆಂಗಳೂರಿನ ಶೆಲ್ ಕಂಪನಿಗಳ ವಹಿವಾಟು ಬೆಳಕಿಗೆ ಬಂದಿದ್ದು, ಈ ಅಕ್ರಮ ಹಣವನ್ನು ಧರ್ಮೋಪದೇಶ ಹಾಗೂ ಎಡಪಂಥೀಯ ಉಗ್ರವಾದದ ತರಬೇತಿಗೆ ಬಳಸಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸದ್ಯ ಎಸಿಪಿ ನೇತೃತ್ವದ ಪೊಲೀಸ್ ತಂಡವು ತನಿಖೆ ನಡೆಸಿ ಇಡಿಗೆ ವರದಿ ಸಲ್ಲಿಸಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ