LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಗ್ರ ಸಂಘಟನೆಗಳಿಗೆ ಯುವಕರ ನೇಮಕ ಪ್ರಕರಣ: ಹಮ್ರಾಜ್ ವರ್ಶಿದ್ ಶೇಖ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಬೆಂಗಳೂರು: ಉಗ್ರ ಸಂಘಟನೆಗಳಿಗೆ ಯುವಕರ ನೇಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಹಮ್ರಾಜ್ ವರ್ಶಿದ್ ಶೇಖ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಹಮ್ರಾಜ್ ವರ್ಶಿದ್ ಶೇಖ್ ಆನ್‌ಲೈನ್ ಮೂಲಕ ಯುವಕರನ್ನು ಸೆಳೆಯುವುದರ ಜೊತೆಗೆ ಅವರ ದುರ್ಬಲ ಮನಸ್ಥಿತಿ ಬಳಕೆ ಮಾಡಿಕೊಂಡು ಯುವಕರನ್ನು ಭಯೋತ್ಪಾದಕ ಸಂಘಟನೆಗೆ ನೇಮಕ ಮಾಡುತ್ತಿದ್ದ. ಹಮ್ರಾಜ್ ಶೇಖ್ ನಿಷೇಧಿತ ತಾಲಿಬಾನ್ ಮತ್ತು ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಭಯೋತ್ಪಾದಕ ಸಂಘಟನೆಗೆ ಯುವಕರನ್ನು ನೇಮಿಸಲು ಯತ್ನಿಸಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿ ಹಮ್ರಾಜ್ ಗೆ ಎನ್ ಐಎ ವಿಶೇಶ ಕೋರ್ಟ್ 7 ವರ್ಷ ಜೈಲು ಶಿಕ್ಷೆ ಹಾಗೂ 63,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

2019 ರಿಂದ 2022ರವರೆಗೂ ಸೌದಿ ಅರೇಬಿಯಾದಲ್ಲಿದ್ದ ಹಮ್ರಾಜ್, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನ ಮೂಲದ ಕೆಲವರ ಸಂಪರ್ಕದಿಂದ ತಾಲಿಬಾನ್ ಮತ್ತು ಟಿಟಿಪಿ ಸಿದ್ಧಾಂತದಿಂದ ಪ್ರಚೋದನೆಗೊಂಡಿದ್ದ. ಈತನ ವಿಚಾರಣೆಯಲ್ಲಿ ಉಗ್ರ ಸಂಘಟನೆಗಳ ಹಂಝಲಾ ಎಂಬ ಆನ್‌ಲೈನ್ ಹ್ಯಾಂಡ್ಲರ್ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ಈ ಹಂಝಲಾ ಎಂಬಾತ ಕಾಶ್ಮೀರ ಪೇಜ್ ಎಂಬ ಇನ್‌ಸ್ಟಾಗ್ರಾಂ ಖಾತೆ ಮೂಲಕ ಯುವಕರನ್ನು ಪ್ರಚೋದಿಸಿ ಮೂಲಭೂತವಾದಿಗಳನ್ನಾಗಿ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಭಾರತಕ್ಕೆ ವಾಪಸ್ ಬಂದ ಬಳಿಕ ಹಮ್ರಾಜ್, ತನ್ನ ಸ್ನೇಹಿತ ಹಾಗೂ ಮೊಹಮ್ಮದ್ ಆರೀಫ್ ಜೊತೆ ಸೇರಿ ತಾಲಿಬಾನ್ ಮತ್ತು ಟಿಟಿಪಿ ಉಗ್ರ ಸಂಘಟನೆ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಯುವಕರನ್ನು ಟಾರ್ಗೆಟ್ ಮಾಡಿ ಸಂಘಟನೆ ಪರವಾಗಿ ಕೆಲಸ ಮಾಡಲು ಪ್ರಚೋದಿಸಿ ಉಗ್ರ ಸಂಘಟನೆಗೆ ನೇಮಕ ಮಾಡಿಕೊಳ್ಳುತ್ತಿದ್ದರು. ಇಬ್ಬರು ಭಾರತದ ವಿರುದ್ಧ ಜಿಹಾದ್ ಯುದ್ಧ ನಡೆಸಲು ಟಿಟಿಪಿ ಸೇರುವ ಉದ್ದೇಶದಿಂದ ತಮ್ಮದೇ ತಂಡ ಕಟ್ಟುವ ಸಿದ್ಧತೆಯಲ್ಲಿದ್ದರು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಎನ್ ಐಎ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ