LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

72,000 ಹುದ್ದೆಗಳ ನೇಮಕಾತಿಗೆ ಇಲಾಖೆಗಳಿಗೆ ನೋಟಿಫಿಕೇಷನ್: ಸ್ಪಷ್ಟನೆ ನೀಡಿದ ಡಿಸಿಎಂ ಪರಮೇಶ್ವರ್

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಂಡಿದೆ. ಈ ಬಗ್ಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಬೆಂಗಳೂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬುತ್ತೇವೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿಯೇ ನಾವು ಹೇಳಿದ್ದೆವು. ಆದರೆ ಅನೇಕ ಕಾರಣಗಳಿಂದ ಅದು ವಿಳಂಬವಾಗಿದೆ. ಇದೀಗ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ನೇಮಕಾತಿ ವಿಚಾರದಲ್ಲಿ ಒಳ ಮೀಸಲಾತಿಯೇ ದೊಡ್ಡ ಸಮಸ್ಯೆಯಾಗಿತ್ತು. ಆದರೀಗ ಒಟ್ಟು 72,000 ಹುದ್ದೆಗಳಿಗೆ ನೇಮಕ ಸಂಬಂಧ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಈ ಬಗ್ಗೆ ಇಲಾಖೆಗಳಿಗೆ ನೋಟಿಫಿಕೇಶನ್​​ಗೂ ಸೂಚಿಸಲಾಗಿದೆ. ಕಂದಾಯ ಇಲಾಖೆಗಳಿಗೂ ನೇಮಕಾತಿಗೆ ಸೂಚಿಸಲಾಗಿದೆ. ಅದೇ ರೀತಿ ಶಿಕ್ಷಕರು, ವೈದ್ಯರು, ನರ್ಸ್ ಗಳು, ಇಂಜಿನಿಯರ್ಸ್ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿಯೂ ವಿಳಂಬ ಮಾಡದೇ ನೇಮಕಾತಿಗೆ ಸೂಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದೆ ಎಂದರು.

ನೇಮಕಾತಿ ನಿಟ್ಟಿನಲ್ಲಿಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಉಮಾಮಹದೇವನ್ ಹಾಗೂ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ನಮ್ಮ ಉದ್ದೇಶವೇನೆಂದರೆ ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನಿರುದ್ಯೋಗಿ ಯುವಕರಿದ್ದಾರೆ. ಅವರೆಲ್ಲರೂ ಹಲವು ಸಂದರ್ಭಗಳಲ್ಲಿ ಬೀದಿಗಿಳಿದು ನೇಮಕಾತಿಗಾಗಿ ಹೋರಾಟ ನಡೆಸಿದ್ದಾರೆ. ಹಾಗಾಗಿ ನಾವು ತಕ್ಷಣ 72,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ