LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

72,186 ಹುದ್ದೆಗಳಿಗೆ ನೇಮಕಾತಿ: ಉನ್ನತ ಮಟ್ಟದ ಅಧಿಕಾರಿಗಳಿಗೆ ಮೇಲುಸ್ತುವಾರಿ ಜವಾಬ್ದಾರಿ: 6 ತಿಂಗಳೊಳಗೆ  ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಮಹತ್ವದ ಆದೇಶ ಹೊರಡಿಸಿದೆ.

72,186 ಗುತ್ತಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದ್ದು, ಈ ಕುರಿತಂತೆ ಉನ್ನತ ಮಟ್ಟದ ಅಧಿಕಾರಿಗಳಿಗೆ ಮೇಲುಸ್ತುವಾರಿ ಜವಾಬ್ದಾರಿ ನೀಡಲಾಗಿದೆ. 2023 -24ನೇ ಸಾಲಿನಿಂದ ಇದುವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳ ಭರ್ತಿ ಮಾಡಲು ಹಣಕಾಸು ಇಲಾಖೆ ಅನುಮತಿ ನೀಡಿದೆ. ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇಕಡ 80 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸಹಮತ ನೀಡಲಾಗಿದೆ. ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಆಯ್ಕೆ ಪ್ರಾಧಿಕಾರಗಳಿಂದ ಕ್ರಿಯಾ ಯೋಜನೆಗಳನ್ನು ಪಡೆದು ಸಚಿವ ಸಂಪುಟದ ಅನುಮೋದನೆಗೆ ಮಂಡಿಸಲಾಗಿತ್ತು. ಈ ಪ್ರಕ್ರಿಯೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಒಟ್ಟು 72,186 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದ್ದು, ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳಿಗೆ ಮೇಲುಸ್ತುವಾರಿ ಜವಾಬ್ದಾರಿ ನೀಡಲಾಗಿದೆ. 2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇ.80 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸಹಮತಿ ನೀಡಲಾಗಿದೆ.

ಈ ಸಂಬಂಧ ಇನ್ನೂ 2 ತಿಂಗಳಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿ, ಮುಂದಿನ 4 ತಿಂಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನ ನಡೆದಲು, ಒಟ್ಟಾರೆ 6 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನ ಪೂರ್ಣಗೊಳಿಸಿ ನೇಮಕಾತಿಗೆ ಆದೇಶ ನೀಡಲು ಸೂಚಿಸಲಾಗಿದೆ.

17 ಇಲಾಖೆಗಳಲ್ಲಿನ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಾದ ಹುದ್ದೆಗಳನ್ನು ತ್ವರಿತಗತಿಯಲ್ಲಿ ಭರ್ತಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೆ ಜವಾಬ್ದಾರಿ ನೀಡಲಾಗಿದೆ. ಇನ್ನೂ 34 ಇಲಾಖೆಗಳಲ್ಲಿನ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಾದ ಹುದ್ದೆಗಳನ್ನ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಜವಾಬ್ದಾರಿ ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ