LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ವಾರ್ತೆ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ 775 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ |Forest Department recruitment 2026

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಸಿಹಿಸುದ್ದಿ ನೀಡಿದೆ. ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು775 ಅರಣ್ಯ ವೀಕ್ಷಕರ (Forest Watcher) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು 2026ರ ಆಗಸ್ಟ್1ರಿಂದ ಆಗಸ್ಟ್31 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಅರಣ್ಯ ಇಲಾಖೆಯಿಂದ ಮಹತ್ವದ ಅವಕಾಶ ಲಭ್ಯವಾಗಿದೆ. ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ 775 ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು 2026ರ ಆಗಸ್ಟ್ 1ರಿಂದ 31ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ₹27,500 ರಿಂದ ₹46,675 ವೇತನ ಶ್ರೇಣಿಯಲ್ಲಿ ಸಂಬಳ ದೊರೆಯಲಿದೆ.

ಅರ್ಜಿ ಸಲ್ಲಿಕೆ ದಿನಾಂಕಗಳು

  • ಅರ್ಜಿ ಸಲ್ಲಿಕೆ ಆರಂಭ: 01 ಆಗಸ್ಟ್ 2026 (00:00:01 ಗಂಟೆಯಿಂದ)
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್ 2026 (23:59:59 ಗಂಟೆಯವರೆಗೆ)
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 02 ಸೆಪ್ಟೆಂಬರ್ 2026

ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆಫ್‌ಲೈನ್ ಅಥವಾ ಇತರೆ ಯಾವುದೇ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಶುಲ್ಕ

ಅಭ್ಯರ್ಥಿಗಳ ವರ್ಗಪುರುಷ ಅಭ್ಯರ್ಥಿಗಳುಮಹಿಳೆ / ತೃತೀಯ ಲಿಂಗಿಗಳು
ಸಾಮಾನ್ಯ, 2A, 2B, 3A, 3B₹200₹100
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1₹100₹50

ಗಮನಿಸಿ: ಅಂಗವಿಕಲ (PwD) ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ವೇತನ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹27,500 ರಿಂದ ₹46,675 ವೇತನ ಶ್ರೇಣಿಯಲ್ಲಿ ಸಂಬಳ ನೀಡಲಾಗುತ್ತದೆ.

ಪ್ರಮುಖ ಸೂಚನೆಗಳು

  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಸ್ವಂತ ಆಧಾರ್ (UID) ಸಂಖ್ಯೆಯನ್ನು ಮಾತ್ರ ಬಳಸಬೇಕು.
  • ಒಮ್ಮೆ ಅರ್ಜಿ ಸಲ್ಲಿಸಿದ ಬಳಿಕ ಯಾವುದೇ ತಿದ್ದುಪಡಿ ಮಾಡಲು ಅವಕಾಶ ಇರುವುದಿಲ್ಲ.
  • ಸ್ಥಳೀಯ ಅರಣ್ಯ ಬುಡಕಟ್ಟು (Local Forest Dwelling Tribes) ಸಮುದಾಯದ ಅಭ್ಯರ್ಥಿಗಳಿಗೆ ನಿಯಮಾನುಸಾರ 50% ಮೀಸಲಾತಿ ಕಲ್ಪಿಸಲಾಗಿದೆ.
  • ಹುದ್ದೆಗಳ ಜಿಲ್ಲಾವಾರು, ವಿಭಾಗವಾರು ಹಾಗೂ ವರ್ಗವಾರು ಮೀಸಲಾತಿ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.

ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಒಳಿತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ