LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

8176 ಪೊಲೀಸ್ ಹುದ್ದೆಗಳ ನೇಮಕಾತಿಗೆ ಆದೇಶ

ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಪೊಲೀಸ್ ಇಲಾಖೆಯ ಖಾಲಿ ಹುದ್ದೆಗಳ ಬಗ್ಗೆ ಚಾಲನೆ ದೊರೆತಿದೆ. 8 ವಿವಿಧ ಪೊಲೀಸ್ ಘಟಕಗಳ 8176 ಹುದ್ದೆಗಳ ನೇಮಕಾತಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ಪರಿಶಿಷ್ಟ ಜಾತಿಯ ಶೇಕಡ 15ರ ಮೀಸಲಾತಿಯಲ್ಲಿ ಒಳ ಮೀಸಲಾತಿಯನ್ನು ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ 400 ಬಿಂದುಗಳ ರೋಸ್ಟರ್ ಹೊರಡಿಸಿ ಗೊಂದಲ ನಿವಾರಿಸಲಾಗಿದೆ.

ನಾಗರಿಕ ಪೊಲೀಸ್ ಕಾನ್ಸ್ಟೇಬಲ್(ಸಿವಿಲ್) 4110,  ಕೆಎಸ್ಆರ್ಪಿ ಕಾನ್ಸ್ಟೇಬಲ್ 2032, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್((ಎಪಿಸಿ) 1650, ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ 20, ಕೆಸ್ಐಎಸ್ಎಫ್ 364 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಆದೇಶಗಳಲ್ಲಿನ ನಿರ್ದೇಶನ ಮತ್ತು ಪರಿಷ್ಕೃತ ರೋಸ್ಟರ್ ಗಳ ಅನುಸಾರ ಮರುಪರಿಶೀಲಿಸಿ ತಮ್ಮ ಘಟಕಗಳಿಗೆ ಹಂಚಿಕೆ ಮತ್ತು ವರ್ಗೀಕರಣ ವಿವರ ತಯಾರಿಸಿ ನೇಮಕಾತಿ ವಿಭಾಗಕ್ಕೆ ಕಳುಹಿಸುವಂತೆ ಡಿಜಿ ಐಜಿಪಿ ಸೂಚನೆ ನೀಡಿದ್ದಾರೆ. ಹೈದರಾಬಾದ್ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹೊರತಾಗಿ ಹುದ್ದೆಗಳನ್ನು ಹಂಚಿಕೆ ಮಾಡಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಕಳೆದ ಮೂರು ನಾಲ್ಕು ವರ್ಷದಿಂದ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಿರಲಿಲ್ಲ. ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ