LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ನೀಟ್ ಪರೀಕ್ಷೆ ಯಶಸ್ವಿ: ಶೇ. 83.23 ರಷ್ಟು ಹಾಜರಾತಿ

ಬಳ್ಳಾರಿ: ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಭಾನುವಾರ ನಗರದ ವಿವಿಧ ಕೇಂದ್ರಗಳಲ್ಲಿ ಅತ್ಯಂತ ಯಶಸ್ವಿಯಾಗಿ ಮತ್ತು ಶಾಂತಿಯುತವಾಗಿ ಜರುಗಿತು.

ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಕಟ್ಟುನಿಟ್ಟಿನ ನಿಗಾದಲ್ಲಿ ಬಳ್ಳಾರಿ ನಗರದ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.

ಜಿಲ್ಲೆಯಲ್ಲಿ ಈ ಬಾರಿ ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಒಟ್ಟು 4,127 ವಿದ್ಯಾರ್ಥಿಗಳಲ್ಲಿ 3,435 ವಿದ್ಯಾರ್ಥಿಗಳು ಹಾಜರಾಗಿದ್ದು, 692 ವಿದ್ಯಾರ್ಥಿಗಳು ಗೈರಾಗಿದ್ದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪರೀಕ್ಷಾ ನಿಯಮಾವಳಿಗಳ ಪ್ರಕಾರ ವಿದ್ಯಾರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಿದ ನಂತರವೇ ಕೇಂದ್ರದ ಒಳಗೆ ಪ್ರವೇಶಿಸಲು ಅನುಮತಿ ನೀಡಲಾಯಿತು. ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದರು. ಒಟ್ಟಾರೆಯಾಗಿ ಬಳ್ಳಾರಿಯಲ್ಲಿ ಶೇ. 83.23 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ನೀಟ್ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ