LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

9, 10ನೇ ತರಗತಿ ಬೋಧನೆಗೆ ಪಿಯು ಉಪನ್ಯಾಸಕರ ಬಳಕೆಗೆ ವಿರೋಧ: ತರಗತಿ ಬಹಿಷ್ಕಾರದ ಎಚ್ಚರಿಕೆ

ಬೆಂಗಳೂರು: 9, 10ನೇ ತರಗತಿ ಬೋಧನೆಗೆ ಪಿಯು ಉಪನ್ಯಾಸಕರ ಬಳಕೆಗೆ ವಿರೋಧ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರದ ಆದೇಶ ರದ್ದು ಮಾಡಡಿದ್ದರೆ ತರಗತಿ ಬಹಿಷ್ಕಾರದ ಎಚ್ಚರಿಕೆ ನೀಡಲಾಗಿದೆ.

ಸರ್ಕಾರದ ಸೇವಾ ನಿಯಮ ತಿದ್ದುಪಡಿಗೆ ಉಪನ್ಯಾಸಕರ ಸಂಘ ಆಗ್ರಹಿಸಿದೆ. ಆದೇಶ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಉಪನ್ಯಾಸಕರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿದೆ. ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸಭೆಯಲ್ಲಿ ಈ ಕುರಿತಾಗಿ ಒತ್ತಾಯಿಸಲಾಗಿದ್ದು, ಸೇವಾ ನಿಯಮ ತಿದ್ದುಪಡಿ ಕರಡು ವರದಿ ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ.

 9 ಮತ್ತು 10ನೇ ತರಗತಿ ಬೋಧನೆಗೆ ಪಿಯು ಉಪನ್ಯಾಸಕರನ್ನು ಬಳಸಬಾರದು, ನೇರ ನೇಮಕಾತಿ ಮೂಲಕ ಪ್ರೌಢಶಾಲೆ ಶಿಕ್ಷಕರ ಕೊರತೆ ನೀಗಿಸಬೇಕು. ಶಿಕ್ಷಣ ತಜ್ಞರ ಸಮಿತಿ ರಚಿಸಿ ವರದಿ ಪಡೆದ ನಂತರ ಬದಲಾವಣೆ ಮಾಡಬೇಕು. ಪಿಯು ಶಿಕ್ಷಣದ ಸ್ವಾಯುತ್ತತೆ ಮತ್ತು ಗುಣಮಟ್ಟ ಕಾಪಾಡಬೇಕು. ಯಾವುದೇ ನೀತಿ ಬದಲಾವಣೆ ಮುನ್ನ ಸಂಘದ ಜೊತೆಗೆ ಚರ್ಚೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸೇವಾ ನಿಯಮ ತಿದ್ದುಪಡಿಗೆ ವಿರೋಧ ವ್ಯಕ್ತವಾಗಿದೆ. 2013ರ ಸೇವಾ ನಿಯಮಗಳಿಗೆ ತಿದ್ದುಪಡಿ ಕರಡು ಅಧಿಸೂಚನೆಗೆ ಆಕ್ಷೇಪ ವ್ಯಕ್ತಪಡಿಸಲಾಗಿದ್ದು, ಹೊಸದಾಗಿ ನೇಮಕವಾಗುವ ಪ್ರತಿಯೊಂದು ಉಪನ್ಯಾಸಕರಿಗೆ 9 ಮತ್ತು 10ನೇ ತರಗತಿಗೂ ಬೋಧನೆ ಕಡ್ಡಾಯಗೊಳಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಲಾಗಿದೆ. ಇದು ಪಿಯು ಶಿಕ್ಷಣದ ಸ್ವರೂಪಕ್ಕೆ ವಿರುದ್ಧವಾದ ಕ್ರಮ ಎಂದು ಸಂಘ ಆರೋಪಿಸಿದೆ.

ಪಿಯು ಮತ್ತು ಪ್ರೌಢಶಾಲೆ ಶಿಕ್ಷಣದ ಪಠ್ಯಕ್ರಮ ಬೋಧನಾ ವಿಧಾನ ಬೇರೆಯಾಗಿದೆ. ಶಿಕ್ಷಕರ ಕೊರತೆ ನಿವಾರಣೆಗೆ ಉಪನ್ಯಾಸಕರ ಬಳಕೆ ಸರಿಯಲ್ಲ, ಸರ್ಕಾರಿ ಕಾಲೇಜುಗಳಿಗೆ ಮಾತ್ರ ಈ ನಿಯಮ ಅನ್ವಯಿಸುವುದು ಸಮಾನ ಶಿಕ್ಷಣ ವ್ಯವಸ್ಥೆಗೆ ವಿರುದ್ಧ ಎಂದು ಉಪನ್ಯಾಸಕರ ಸಂಘ ಹೇಳಿದೆ. ಪಿಯು ಶಿಕ್ಷಣ ವ್ಯವಸ್ಥೆ ಗುಣಮಟ್ಟದ ಮೇಲೆ ದುಷ್ಪರಿಣಾಮ ಬೀರುವ ಕರಡು ಅಧಿಸೂಚನೆಯನ್ನು ತಕ್ಷಣ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ