LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಹಬ್ಬಕ್ಕೂ ಮುನ್ನ ಸ್ವೀಟ್ ಅಂಗಡಿಗಳಿಗೆ ಬಿಗ್ ಶಾಕ್ : ಬೆಂಗಳೂರಿನ 90 ಅಂಗಡಿಗಳ ಮೇಲೆ FSSAI ದಾಳಿ, ಪರಿಶೀಲನೆ!

ಬೆಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆಯೇ ಸಿಹಿ ತಿಂಡಿ ಪ್ರಿಯರಿಗೆ ಹಾಗೂ ಸ್ವೀಟ್ಸ್‌ ಅಂಗಡಿ ಮಾಲೀಕರಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ದೊಡ್ಡ ಶಾಕ್ ನೀಡಿದೆ. ಹಬ್ಬದ ವೇಳೆ ಕಲಬರಕೇ ಮತ್ತು ಕಳಪೆ ಗುಣಮಟ್ಟದ ಸಿಹಿತಿಂಡಿಗಳ ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ವ್ಯಾಪಕ ಪರಿಶೀಲನೆ ಕೈಗೊಂಡಿದ್ದಾರೆ.

ಬೆಂಗಳೂರಿನ ಗಾಂಧಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ವಿಜಯನಗರ ಸೇರಿದಂತೆ ಪ್ರಮುಖ ಪ್ರದೇಶಗಳ ಸ್ವೀಟ್ಸ್ ಅಂಗಡಿಗಳು ಹಾಗೂ ಸಿಹಿ ತಯಾರಿಕಾ ಘಟಕಗಳ ಮೇಲೆ FSSAI ಅಧಿಕಾರಿಗಳು ಒಟ್ಟು 90ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಕೇವಲ ರಾಜಧಾನಿಯಷ್ಟೇ ಅಲ್ಲದೆ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಈ ಕಾರ್ಯಾಚರಣೆ ಮುಂದುವರಿದಿದೆ. ಹಬ್ಬದ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಾ, ನೈರ್ಮಲ್ಯವಿಲ್ಲದೆ ಮತ್ತು ಹಳೆಯ ವಸ್ತುಗಳನ್ನು ಬಳಸಿ ಸಿಹಿ ತಯಾರಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಕ್ಟೋಬರ್ 17ರವರೆಗೆ ರಾಜ್ಯಾದ್ಯಂತ ಈ ವಿಶೇಷ ತಪಾಸಣೆ ಮುಂದುವರಿಯಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ