LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯಿಂದ 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್

ಕೊಪ್ಪಳ: ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.

ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ (ಸೆ. 15) ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಿಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು.

ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ನಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು.

ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು.

ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ. 211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು.

3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು.

ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 To 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್  (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 To 125)ನ  ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು.

ಒಟ್ಟು 9 ಹಳ್ಳಿಗಳಿಗೆ ಅನುಕೂಲ: ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ, ಮುಖಂಡರಾದ ಗಾಳೆಪ್ಪ ಪೂಜಾರ್, ಹಟ್ಟಿ ಭರಮಪ್ಪ, ರಾಮಣ್ಣ ಚೌಡ್ಕಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Rain Alert : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ.!ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯಿಂದ 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ಪ್ರಧಾನಿ ಮೋದಿ 76ನೇ ಜನ್ಮದಿನ: ನಾಳೆಯಿಂದ ಬಿಜೆಪಿ ವತಿಯಿಂದ ದೇಶಾದ್ಯಂತ ‘ಸೇವಾ ಸಂಕಲ್ಪ’ ಅಭಿಯಾನಪೋಷಕರೇ ಎಚ್ಚರ : ಬಾಲ್ಯವಿವಾಹ ಮಾಡಿಸಿದರೆ 2 ವರ್ಷ ಜೈಲು, ₹1 ಲಕ್ಷ ದಂಡ ಫಿಕ್ಸ್.!ಗೃಹಜ್ಯೋತಿ ಅಕ್ರಮ ತಡೆಗೆ ಮನೆ-ಮನೆ ಪರಿಶೀಲನೆ; ಡೋರ್‌ಲಾಕ್ ಮನೆಗಳಿಗೆ ನೋಟಿಸ್ ಕಡ್ಡಾಯ!BIG NEWS: ಇಂದಿನಿಂದ 5 ದಿನ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 'ಮದ್ಯ ಮಾರಾಟ' ನಿಷೇಧರಾಜ್ಯ ಜನತೆಗೆ ಬಿಗ್ ಶಾಕ್ : ಮತ್ತೆ ಅಕ್ಕಿ ದರ ಭಾರಿ ಏರಿಕೆ | Rice Price Hikeರಾಜ್ಯದ 956 ಸರ್ಕಾರಿ ಶಾಲೆಗಳಲ್ಲಿ ಹಣಕಾಸು ಶಿಕ್ಷಣ: ಬ್ಯಾಂಕಿಂಗ್, ಡಿಜಿಟಲ್ ವಹಿವಾಟು ಬಗ್ಗೆ ಪಾಠ.!ನಾಳೆ ಕಲ್ಯಾಣ ಕರ್ನಾಟಕ ಉತ್ಸವ : ಧ್ವಜಾರೋಹಣಕ್ಕೆ ಸಚಿವರನ್ನು ನಿಯೋಜಿಸಿ ಸರ್ಕಾರ ಆದೇಶಗ್ರಾಹಕರೇ ಗಮನಿಸಿ : 2 ದಿನಗಳ ಕಾಲ ಬೆಸ್ಕಾಂ ಆನ್ ಲೈನ್ ಸೇವೆ ಸ್ಥಗಿತ