LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಕಿ, ತೊಗರಿ ಬೆಳೆ ಆಯ್ತು, ಈಗ ಜೋಳದ ಸರದಿ : ಕ್ವಿಂಟಲ್ ಜೋಳಕ್ಕೆ 9200ಕ್ಕೆ ಏರಿದ ದರ!

ಬೆಂಗಳೂರು : ಉತ್ತರ ಕರ್ನಾಟಕದ ಜನಸಾಮಾನ್ಯರ ನಿತ್ಯದ ಆಹಾರವಾಗಿರುವ ಜೋಳದ ಬೆಲೆಯಲ್ಲಿ ತೀವ್ರ ಏರಿಕೆಯಾಗಿದ್ದು, ಜನಸಾಮಾನ್ಯರ ಹಾಗೂ ಹೋಟೆಲ್ ಉದ್ಯಮಿಗಳ ಕಂಗಾಲಿಗೆ ಕಾರಣವಾಗಿದೆ. ಮಾರುಕಟ್ಟೆಯಲ್ಲಿ ಜೋಳದ ಲಭ್ಯತೆ ಗಣನೀಯವಾಗಿ ಕಡಿಮೆಯಾಗಿರುವುದರಿಂದ, ಬೇಡಿಕೆ ಹೆಚ್ಚಾಗಿ ಬೆಲೆ ಗಗನಕ್ಕೇರಿದೆ.

ಕಳೆದ ಆಗಸ್ಟ್ ತಿಂಗಳಲ್ಲಿ ಕ್ವಿಂಟಾಲ್‌ಗೆ ₹5,500ರಷ್ಟಿದ್ದ ಪ್ರಸಿದ್ಧ ಮಾಲ್ದಂಡಿ ತಳಿಯ ಜೋಳದ ಬೆಲೆ, ಸೆಪ್ಟೆಂಬರ್‌ನಲ್ಲಿ ₹5,650ಕ್ಕೆ ಏರಿಕೆಯಾಗಿ, ಅಕ್ಟೋಬರ್ ವೇಳೆಗೆ ಬರೋಬ್ಬರಿ ₹9,200ಕ್ಕೆ ತಲುಪಿದೆ. ಇನ್ನು 'ಗುಂಡು ತೆನೆ' ತಳಿಯ ಜೋಳದ ದರವೂ ಸಹ ₹9,000ದ ಗಡಿ ದಾಟಿದ್ದು, ಕಳೆದ ಹತ್ತು ವರ್ಷಗಳಲ್ಲೇ ಇದು ದಾಖಲೆಯ ಗರಿಷ್ಠ ಬೆಲೆಯಾಗಿದೆ.

ಉತ್ಪಾದನಾ ಕುಸಿತಕ್ಕೆ ಪ್ರಮುಖ ಕಾರಣ ಈ ಬಾರಿ ಎದುರಾಗಿರುವ ಬರ ಪರಿಸ್ಥಿತಿಯಾಗಿದೆ. ಕಲಬುರಗಿ ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೋಳ ಪ್ರಮುಖ ಬೆಳೆಯಾಗಿದ್ದರೂ, ಮಳೆಯ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ನಿರೀಕ್ಷಿತ ಪ್ರಮಾಣದ ಇಳುಬರಿ ಬಂದಿಲ್ಲ. ಮಾರುಕಟ್ಟೆಗೆ ಒಳಹರಿವು ಕಡಿಮೆ ಇರುವುದರಿಂದ ಸಗಟು ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಬಿಸಿ ಮುಂದುವರಿದಿದೆ.

ಈ ಕಚ್ಚಾ ವಸ್ತುವಿನ ಬೆಲೆ ಏರಿಕೆಯ ನೇರ ಪ್ರಭಾವ ಜೋಳದ ರೊಟ್ಟಿ ತಯಾರಿಕೆ ಮತ್ತು ಮಾರಾಟದ ಮೇಲೂ ಬೀಳುವ ಸಾಧ್ಯತೆಯಿದೆ. ಸದ್ಯ ಮಾರುಕಟ್ಟೆಯಲ್ಲಿ ಒಂದು ರೊಟ್ಟಿಗೆ ₹10 ರಿಂದ ₹15 ಬೆಲೆಯಿದ್ದು, ಬೆಲೆ ನಿಯಂತ್ರಣಕ್ಕೆ ಬಾರದಿದ್ದರೆ ಹೋಟೆಲ್ ಹಾಗೂ ರೊಟ್ಟಿ ಮಾರಾಟಗಾರರು ದರ ಪರಿಷ್ಕರಿಸುವುದು ಅನಿವಾರ್ಯವಾಗಬಹುದು. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಹೊಸ ಬೆಳೆ ಬರುವವರೆಗೆ ಬೆಲೆ ಇಳಿಕೆಯಾಗುವ ನಿರೀಕ್ಷೆಯಿಲ್ಲದಿರುವುದು ಕೃಷಿ ವಲಯ ಹಾಗೂ ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!