LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ALERT : ಪೋಷಕರೇ ಎಚ್ಚರ : ತೆರೆದಿದ್ದ ಸೆಪ್ಟಿಕ್ ಟ್ಯಾಂಕ್’ಗೆ ಬಿದ್ದು 5 ವರ್ಷದ ಬಾಲಕ ಸಾವು ; ವೀಡಿಯೋ ವೈರಲ್ |WATCH VIDEO

ಮಹಾರಾಷ್ಟ್ರದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ತೆರೆದ ಸ್ಥಿತಿಯಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ಗೆ ಆಕಸ್ಮಿಕವಾಗಿ ಬಿದ್ದ 5 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಘಟನೆ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ಮಾಹಿತಿಯ ಪ್ರಕಾರ, ಬಾಲಕ ಮೊಹಮದ್  ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಮುಚ್ಚದ ಸೆಪ್ಟಿಕ್ ಟ್ಯಾಂಕ್ ಗುಂಡಿಯ ಬಳಿ ತೆರಳಿದ್ದಾನೆ, ಆಕಸ್ಮಾತ್ ಆಗಿ ಅದರ ಒಳಗೆ ಬಿದ್ದಿದ್ದಾನೆ. ಕೆಲ ಸಮಯದ ಬಳಿಕ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಕೂಡಲೇ  ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಯಾವುದೇ ಪ್ರಯೋಜನವಾಗಿಲ್ಲ.   ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸೆಪ್ಟಿಕ್ ಟ್ಯಾಂಕ್ ಸುರಕ್ಷತಾ ಕ್ರಮಗಳಲ್ಲಿ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಈ ಘಟನೆ ಮಕ್ಕಳ ಸುರಕ್ಷತೆ ಕುರಿತು ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಮೊಳಗಿಸಿದೆ. ವಸತಿ ಪ್ರದೇಶಗಳು, ನಿರ್ಮಾಣ ಹಂತದ ಕಟ್ಟಡಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತೆರೆದ ಗುಂಡಿಗಳು, ಚರಂಡಿಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳು ಮಕ್ಕಳ ಜೀವಕ್ಕೆ ಅಪಾಯವಾಗುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.ಸ್ಥಳೀಯರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಇಂತಹ ದುರಂತಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ