LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ

ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚೆಯ ಬಳಿಕ ರಾಜೀನಾಮೆ ನೀಡುವ ಬಗ್ಗೆ ಅವರು ಆಪ್ತ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿದ್ಧರಾಮಯ್ಯ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ರಾಜ್ಯಸಭಾ ಸದಸ್ಯರಾಗಿ ರಾಷ್ಟ್ರ ರಾಜಕಾರಣಕ್ಕೆ ಬನ್ನಿ. ನಿಮ್ಮ ಪುತ್ರ ಯತೀಂದ್ರ ಅವರಿಗೆ ಡಿಸಿಎಂ ಸ್ಥಾನ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಇದಕ್ಕೆ ಒಪ್ಪದ ಸಿದ್ಧರಾಮಯ್ಯ ಸಮಯ ಕೇಳಿದ್ದಾರೆ.

ರಾಹುಲ್ ಭೇಟಿ ಬಳಿಕ ಆಪ್ತ ಸಚಿವರೊಂದಿಗೆ ಸಿದ್ಧರಾಮಯ್ಯ ಅಧಿಕಾರ ಹಂಚಿಕೆ ಸೂತ್ರದ ಪ್ರಕಾರ ರಾಜೀನಾಮೆ ನೀಡುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಸಿದ್ಧರಾಮಯ್ಯ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

ಇನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಸಚಿವರು, ಶಾಸಕರ ಜತೆ ಚರ್ಚೆ ನಡೆಸಲಿದ್ದಾರೆ. ರಾಜೀನಾಮೆ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ ಕೈಗೊಂಡಿದ್ದಾರೆ. ಹೊಸ ಮುಖ್ಯಮಂತ್ರಿ ಜೊತೆಗೆ ನಾಲ್ವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುವುದು. ಜಮೀರ್ ಅಹ್ಮದ್ ಖಾನ್, ಡಾ. ಯತೀಂದ್ರ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ. ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ