LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG BREAKING: SC, ST ಮೀಸಲಾತಿ ಪ್ರಮಾಣ ಹೆಚ್ಚಳ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಹಾಗೂ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಒಟ್ಟು ಮೀಸಲಾತಿ ಮಿತಿಯನ್ನು ಶೇಕಡಾ 50 ರಿಂದ ಶೇಕಡಾ 56 ಕ್ಕೆ ಏರಿಸಿದ್ದ ಸರ್ಕಾರದ ಕ್ರಮ ಸಂವಿಧಾನಬಾಹಿರ ಎಂದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದೆ.

ಕೋರ್ಟ್ ಕದ ತಟ್ಟಿದ್ದ ಪಿಐಎಲ್:

ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿನ ಪ್ರವೇಶಾತಿ ಹಾಗೂ ರಾಜ್ಯಾಧೀನ ಸೇವೆಗಳ (ಸರ್ಕಾರಿ ಉದ್ಯೋಗ) ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15 ರಿಂದ ಶೇ. 17 ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಿ ಹಿಂದಿನ ಸರ್ಕಾರ ಕಾಯ್ದೆ ರೂಪಿಸಿತ್ತು. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣವು ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಶೇ. 50 ರ ಗಡಿಯನ್ನು ಮೀರಿ ಶೇ. 56 ಕ್ಕೆ ತಲುಪಿತ್ತು. ಸರ್ಕಾರದ ಈ ತೀರ್ಮಾನವನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿಶ್ರಾ ಸೇರಿದಂತೆ ಹಲವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು.

ಇಂದಿರಾ ಸಹಾನಿ ತೀರ್ಪಿನ ಉಲ್ಲೇಖ:

ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ಸುಪ್ರೀಂ ಕೋರ್ಟ್‌ನ ಐತಿಹಾಸಿಕ 'ಇಂದಿರಾ ಸಹಾನಿ' ಪ್ರಕರಣದ ತೀರ್ಪನ್ನು ಉಲ್ಲೇಖಿಸಿದೆ. ಯಾವುದೇ ಅಸಾಧಾರಣ ಸಂದರ್ಭಗಳನ್ನು ಹೊರತುಪಡಿಸಿ ಒಟ್ಟು ಮೀಸಲಾತಿ ಪ್ರಮಾಣ ಶೇ. 50 ಕ್ಕಿಂತ ಹೆಚ್ಚಾಗುವಂತಿಲ್ಲ ಎಂಬ ಸಾಂವಿಧಾನಿಕ ಮಿತಿಯನ್ನು ಹೈಕೋರ್ಟ್ ಒತ್ತಿಹೇಳಿದೆ. ಸೂಕ್ತ ಪ್ರಾಯೋಗಿಕ ದತ್ತಾಂಶಗಳು ಮತ್ತು ಸಾಂವಿಧಾನಿಕ ಮಾನ್ಯತೆಯಿಲ್ಲದೆ ಮಿತಿಯನ್ನು ಮೀರಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಪೀಠ, ಹೆಚ್ಚಳ ಮಾಡಲಾಗಿದ್ದ ಕಾಯ್ದೆಯ ನಿಬಂಧನೆಗಳನ್ನು ರದ್ದುಪಡಿಸಿದೆ.

ಹೈಕೋರ್ಟ್‌ನ ಈ ಆದೇಶದಿಂದಾಗಿ ಪ್ರಸ್ತುತ ಜಾರಿಯಲ್ಲಿದ್ದ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶ ಪ್ರಕ್ರಿಯೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದ್ದು, ರಾಜ್ಯ ಸರ್ಕಾರವು ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ನಿರೀಕ್ಷೆಯಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ