LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಜುಲೈ 1ರಿಂದ ‘LPG’ ಗ್ರಾಹಕರಿಗೆ ಹೊಸ ನಿಯಮ ; ಈ ಕೆಲಸ ಮಾಡದಿದ್ದರೆ ಗ್ಯಾಸ್ ಸಂಪರ್ಕ ರದ್ದಾಗಬಹುದು !

ಮನೆಯಲ್ಲೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರಿಗೆ ಮಹತ್ವದ ಮಾಹಿತಿ. ಜುಲೈ 1ರಿಂದ ಎಲ್‌ಪಿಜಿ ಸಂಪರ್ಕಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈ ನಿಯಮಗಳನ್ನು ಪಾಲಿಸದಿದ್ದರೆ ಕೆಲ ಗ್ರಾಹಕರ ಗ್ಯಾಸ್ ಸಂಪರ್ಕ ರದ್ದಾಗುವ ಸಾಧ್ಯತೆಯಿದ್ದು, ಇ-ಕೆವೈಸಿ ಪೂರ್ಣಗೊಳಿಸದವರು ಹಾಗೂ ಪಿಎನ್‌ಜಿ (ಪೈಪ್ ನ್ಯಾಚುರಲ್ ಗ್ಯಾಸ್) ಸೌಲಭ್ಯ ಇರುವ ಪ್ರದೇಶದ ಗ್ರಾಹಕರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕಿದೆ.

ಪಿಎನ್‌ಜಿ ಇದ್ದರೆ 30 ದಿನಗಳಲ್ಲಿ ಎಲ್‌ಪಿಜಿ ಸಂಪರ್ಕ ರದ್ದು?

ಹೊಸ ನಿಯಮದ ಪ್ರಕಾರ, ಈಗಾಗಲೇ ಮನೆಯಲ್ಲಿ ಪಿಎನ್‌ಜಿ ಸಂಪರ್ಕ ಹೊಂದಿದ್ದು, ಜೊತೆಗೆ ಇಂಡೇನ್, ಭಾರತ್ ಗ್ಯಾಸ್ ಅಥವಾ ಎಚ್‌ಪಿ ಗ್ಯಾಸ್ ಎಲ್‌ಪಿಜಿ ಸಂಪರ್ಕವನ್ನೂ ಬಳಸುತ್ತಿರುವವರಲ್ಲಿ ಒಂದು ಸಂಪರ್ಕ ಮಾತ್ರ ಮುಂದುವರಿಸಲು ಅವಕಾಶ ನೀಡಲಾಗುತ್ತದೆ ಎಂದು ವರದಿಗಳು ಹೇಳುತ್ತಿವೆ. ಸ್ವಯಂಪ್ರೇರಿತವಾಗಿ ಎಲ್‌ಪಿಜಿ ಸಂಪರ್ಕವನ್ನು ಹಿಂತಿರುಗಿಸಿದವರಿಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಮತ್ತೆ ಸಂಪರ್ಕ ಪಡೆಯಲು ಕೂಪನ್ ನೀಡಲಾಗುತ್ತದೆ ಎನ್ನಲಾಗಿದೆ.

3 ತಿಂಗಳ ಗಡುವು ಅಂತ್ಯ

ಪಿಎನ್‌ಜಿ ಸೌಲಭ್ಯ ಲಭ್ಯವಿರುವ ಪ್ರದೇಶಗಳ ಎಲ್‌ಪಿಜಿ ಗ್ರಾಹಕರು ಮೂರು ತಿಂಗಳೊಳಗೆ ಪಿಎನ್‌ಜಿಗೆ ಬದಲಾಗಬೇಕು ಎಂದು ಸರ್ಕಾರ ಈ ವರ್ಷದ ಮಾರ್ಚ್‌ನಲ್ಲಿ ಸೂಚಿಸಿತ್ತು. ಈ ಗಡುವು ಜೂನ್ ಅಂತ್ಯದೊಂದಿಗೆ ಮುಕ್ತಾಯವಾಗುತ್ತಿರುವುದರಿಂದ, ಇನ್ನೂ ಬದಲಾವಣೆ ಮಾಡದವರು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇ-ಕೆವೈಸಿ ಕಡ್ಡಾಯ

ಎಲ್ಲ ಎಲ್‌ಪಿಜಿ ಗ್ರಾಹಕರಿಗೂ ಇ-ಕೆವೈಸಿ ಕಡ್ಡಾಯವಾಗಿದೆ. ಜೂನ್ 30ರೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ, ಜುಲೈ 1ರಿಂದ ಗ್ಯಾಸ್ ಸೇವೆ ಸ್ಥಗಿತವಾಗುವ ಅಥವಾ ಸಿಲಿಂಡರ್ ಬುಕ್ ಮಾಡಲು ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಈಗಾಗಲೇ ಇ-ಕೆವೈಸಿ ಪೂರ್ಣಗೊಳಿಸಿರುವವರು ಮತ್ತೆ ಮಾಡುವ ಅಗತ್ಯವಿಲ್ಲ.

ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ ಸಾಧ್ಯತೆ

ಪ್ರಸ್ತುತ ನಗರ ಪ್ರದೇಶಗಳಲ್ಲಿ ಒಂದು ಸಿಲಿಂಡರ್ ಬುಕ್ ಮಾಡಿದ ಬಳಿಕ ಮತ್ತೊಂದು ಬುಕ್ ಮಾಡಲು 25 ದಿನ, ಗ್ರಾಮೀಣ ಪ್ರದೇಶಗಳಲ್ಲಿ 45 ದಿನ ಕಾಯಬೇಕಿದೆ. ಈ ಅವಧಿಯನ್ನು ಕಡಿಮೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂಬ ವರದಿಗಳು ಹರಿದಾಡಿವೆ. ಇದು ಜಾರಿಯಾದರೆ ಸಾಮಾನ್ಯ ಗ್ರಾಹಕರಿಗೆ ಅನುಕೂಲವಾಗಲಿದೆ.

ಸೂಚನೆ: ಮೇಲಿನ ಮಾಹಿತಿ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಆಧರಿಸಿದೆ. ಜುಲೈ 1ರಿಂದ ಜಾರಿಯಾಗುವ ನಿಯಮಗಳ ಕುರಿತು ಅಧಿಕೃತ ಅಧಿಸೂಚನೆಗಾಗಿ ಸಂಬಂಧಿತ ತೈಲ ಮಾರಾಟ ಕಂಪನಿಗಳು ಅಥವಾ ಕೇಂದ್ರ ಸರ್ಕಾರದ ಪ್ರಕಟಣೆಗಳನ್ನು ಪರಿಶೀಲಿಸುವುದು ಸೂಕ್ತ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ