LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಜೂ.15 ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ; ಜಿಲ್ಲಾಡಳಿತ ಆದೇಶ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ದಿ: 15/06/2026 ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ನೀಡಿರುತ್ತಾರೆ.

ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಹುಲಿಕಲ್ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ನಂತರ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳದಿರುವುದರಿಂದ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಹೆಚ್ಚಿನ ಓಡಾಟವಿದ್ದು, ಮುಂದಿನ ದಿನಗಳಲ್ಲಿಯೂ ಇದು ಮುಂದುವರಿದಲ್ಲಿ ಅಲ್ಲಲ್ಲಿ ರಸ್ತೆಯ ಬದಿಯ ಭೂಕುಸಿತ ಆಗುವ, ಅಫಘಾತವಾಗುವ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವ ಸಂಭವ ಇರುತ್ತದೆ. ಹಾಗೂ ಅರೋಗ್ಯ ಸಮಸ್ಯೆಯ ಕುರಿತು ಮಣಿಪಾಲ್, ಉಡುಪಿ, ಮಂಗಳೂರಿಗೆ ಹೋಗುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಯ ನಾಗರಿಕರಿಗೆ ಇರುವ ಸಂಪರ್ಕ ಬಂದ್ ಆದರೆ ನಾಲ್ಕು ಜಿಲ್ಲೆಯ ನಾಗರೀಕರಿಗೆ ತುಂಬಾ ತೊಂದರೆಯಾಗುವ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಪರ್ಯಾಯ ಸಂಚಾರ ಮಾರ್ಗಗಳಾದ ತೀರ್ಥಹಳ್ಳಿ –ಉಡುಪಿ ಕಡೆಗೆ ಹೋಗುವ ವಾಹನಗಳು ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ-ಉಡುಪಿ ಮತ್ತು ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗವಾಗಿ ಸಂಚರಿಸುವುದು.ಉಡುಪಿ- ತೀರ್ಥಹಳ್ಳಿ ಕಡೆಗೆ ಹೋಗುವ ವಾಹನಗಳು ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಮತ್ತು ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ- ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸು​ವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್

ಶಿವಮೊಗ್ಗಸೂಡಾ ವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ.3.70 ಕೋಟಿ ವೆಚ್ಚದಲ್ಲಿ ಸುಮಾರು 1200ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಗೆಜ್ಜೇನಹಳ್ಳಿ-ಸೋಮಿನಕೊಪ್ಪ ರಸ್ತೆಗೆ ಲಿಂಕ್ ಮಾಡಲಾಗುವುದು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.

ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಗುರುವಾರ 60.00 ಮೀ ಅಗಲದ ಮಹಾಯೋಜನೆಯ ಹೊರ ವರ್ತುಲ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ವಾಜಪೇಯಿ ಬಡಾವಣೆಯ ರಿಂಗ್ ರಸ್ತೆ ಅಭಿವೃದ್ದಿ ಕಾಮಗಾರಿಗೆ ಸುಮಾರು ರೂ.5 ಕೋಟಿ ಮೊತ್ತದ ಟೆಂಡರ್ ಕರೆಯಲಾಗಿದ್ದು ರೂ.3.70 ಕೋಟಿಕರಾರು ಮೊತ್ತದಲ್ಲಿ ಕಾಮಗಾರಿ ಆರಂಭವಾಗಲಿದೆ. 34 ಕಿ.ಮೀ. ರಿಂಗ್ ರಸ್ತೆ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್ ಸಿದ್ದಪಡಿಸಲಾಗಿದ್ದು, ಹಂತ ಹಂತವಾಗಿ ರಸ್ತೆ ನಿರ್ಮಾಣ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಅಪಾರ್ಟ್ಮೆಂಟ್ ನಿರ್ಮಾಣ : ನಗರ ವೇಗವಾಗಿ ಬೆಳೆಯುತ್ತಿದ್ದು, ನಿವೇಶನ, ಜಾಗಗಳು ದುಬಾರಿಯಾಗಿವೆ. ಸಾಮಾನ್ಯ ಜನರಿಗೆ ನಿವೇಶನ ಕೊಂಡು ಮನೆ ಕಟ್ಟಿಸುವುದು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಊರಗಡೂರಿನಲ್ಲಿ 4 ಎಕರೆ ಜಾಗದಲ್ಲಿ 1, 2 ಮತ್ತು 3 ಬಿಹೆಚ್‌ಕೆಯ ಸುಮಾರು 1000 ಫ್ಲಾಟ್‌ಗಳನ್ನು ನಿರ್ಮಿಸುವ ಯೋಜನೆಯು ಆಡಳಿತಾತ್ಮಕ ಮಂಜೂರಾತಿಗೆ ಹೋಗಿದ್ದು ಇನ್ನು 15 ರಿಂದ 20 ದಿನಗಳಲ್ಲಿ ಮಂಜೂರಾತಿ ದೊರೆತು ಕಾಮಗಾರಿ ಪ್ರಕ್ರಿಯೆ ಆರಂಭಿಸಲಾಗುವುದು.

ಹಾಗೂ ಜೆಹೆಚ್ ಪಟೇಲ್ ಬಡಾವಣೆಯ ಒಂದೂಕಾಲು ಎಕರೆಯಲ್ಲಿ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆಯಿದ್ದು ಖಾಸಗಿ ಅಪಾರ್ಟ್ಮೆಂಟ್‌ನಲ್ಲಿರುAವತೆ ಸ್ವಿಮ್ಮಿಂಗ್ ಪೂಲ್, ಪಾರ್ಕ್, ಕ್ಲಬ್ ಹೌಸ್, ಸಭಾಂಗಣ ಇತರೆ ಎಲ್ಲ ಸೌಲಭ್ಯ ಹೊಂದಿರುವ ಅಪಾರ್ಟ್ಮೆಂಟ್‌ಗಳನ್ನು ನಿರ್ಮಿಸಲಾಗುವುದು.ಮಾಲ್‌ಗಳ ನಿರ್ಮಾಣ : ಸಾಮಾನ್ಯ ಜನರ ಅನುಕೂಲಕ್ಕಾಗಿ ಗೋಪಾಲಗೌಡ ಬಡಾವಣೆಯ ವಿವೇಕಾನಂದ ಬಡಾವಣೆಯಲ್ಲಿ ಒಂದೂಕಾಲು ಎಕರೆ ಜಾಗದಲ್ಲಿ 01 ಮಾಲ್ ಮತ್ತು ಸೋಮಿನಕೊಪ್ಪ 200 ಮೀ ರಸ್ತೆಯಲ್ಲಿ 01 ಒಟ್ಟು 02 ಮಾಲ್‌ಗಳನ್ನು ನಿರ್ಮಿಸುವ ಉದ್ದೇಶವಿದೆ. ಹಾಗೂ ವಾಜಪೇಯಿ ಲೇಔಟಿನಲ್ಲಿ ಪ್ರಾಧಿಕಾರದ ಕಚೇರಿ ನಿರ್ಮಾಣ ಮಾಡುವ ಯೋಜನೆಯಿದೆ ಎಂದರು.

ಶಿವಮೊಗ್ಗ ನಗರವನ್ನು ಸುಂದರಗೊಳಿಸಲು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸೂಡಾ ವತಿಯಿಂದ ಪಾರ್ಕುಗಳ ಅಭಿವೃದ್ದಿ, ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್ ನಿರ್ಮಾಣ ಹೀಗೆ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಪಾರ್ಕುಗಳಲ್ಲಿ, ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಡಲು ಒತ್ತು ನೀಡಲಾಗುತ್ತಿದೆ ಎಂದರು.

ನಗರದ ನಾಗರೀಕರು, ಹಿರಿಯ ನಾಗರೀಕರು, ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ 100 ಪಾರ್ಕುಗಳನ್ನು ಅಭಿವೃದ್ದಿಪಡಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಈಗಾಗಲೇ ವಾಕಿಂಗ್ ಪಾಥ್, ಲೈಟಿಂಗ್, ಗಿಡ ನೆಡಲು ಸ್ಥಳಾವಕಾಶ ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ 50 ಪಾರ್ಕ್ಗಳನ್ನು ಅಭಿವೃದ್ದಿಪಡಿಸಲಾಗಿದೆ ಎಂದು ತಿಳಿಸಿದರು.

ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ಸೂಡಾ ವತಿಯಿಂದ ಜನ ಸಾಮಾನ್ಯರಿಗೆ ಕಡಿಮೆ ಬೆಲೆಯಲ್ಲಿ ನಿವೇಶನ ಹಂಚಿಕೆ ಮಾಡುವ ಆಗುತ್ತಿದೆ. ಜೊತೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ದಿ, ಕೆರೆಗಳು, ಪಾರ್ಕ್ಗಳ ಅಭಿವೃದ್ದಿ ಕಾರ್ಯವೂ ಆಗುತ್ತಿದೆ. ರಾಜ್ಯ ಸರ್ಕಾರವು ನಗರಾಭಿವೃದ್ದಿ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಈ ಮೂಲಕ ಮನವಿ ಮಾಡಿದರು.ನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 12 ಎಕರೆ ಜಾಗ ಮಂಜೂರಾಗಿದ್ದು, ವೇಗವಾಗಿ ಕಾಮಗಾರಿ ನಡೆಯಬೇಕಿದೆ .ಜೊತೆಗೆ ಫುಟ್‌ಬಾಲ್ ಕ್ರೀಡಾಂಗಣ ಮಂಜೂರಾತಿ ಬಗ್ಗೆಯೂ ಕ್ರೀಡಾ ಸಚಿವರ ಬಳಿ ಮಾತನಾಡುವುದಾಗಿ ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ