LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಭೂಮಿ ತಂತ್ರಾಂಶದಲ್ಲಿ ಹೊಸ ಕಂದಾಯ ವರ್ಷ 2026-27 ಅಳವಡಿಕೆ ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ‘ಭೂಮಿ’ ತಂತ್ರಾಂಶದಲ್ಲಿ 2026-27ನೇ ಸಾಲಿನ ಹೊಸ ಕಂದಾಯ ವರ್ಷದ ಬದಲಾವಣೆ ಪ್ರಕ್ರಿಯೆಯನ್ನು ಜಾರಿಗೆ ತಂದಿದ್ದು, ಈ ನಿಟ್ಟಿನಲ್ಲಿ ಕಂದಾಯ ಆಯುಕ್ತಾಲಯವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಾದ ನಿರ್ದೇಶನಗಳನ್ನು ನೀಡಿದೆ.

ಜುಲೈ 01, 2026 ರಿಂದ 2026-27ನೇ ಸಾಲಿನ ಹೊಸ ಕಂದಾಯ ವರ್ಷ ಅಧಿಕೃತವಾಗಿ ಪ್ರಾರಂಭವಾಗಿದೆ. ವಹಿವಾಟು ಸಂಖ್ಯೆಗಳ ಮರುಹೊಂದಾಣಿಕೆ: ತಂತ್ರಾಂಶದಲ್ಲಿನ ‘Transaction Number’ ಮತ್ತು ‘Mutation Number’ಗಳನ್ನು ಕ್ರಮವಾಗಿ 4 ಮತ್ತು 1 ರಿಂದ ಹೊಸದಾಗಿ ಮರುಪ್ರಾರಂಭಿಸಲು ಎಲ್ಲಾ ತಾಲ್ಲೂಕುಗಳಲ್ಲಿ ‘Revenue Year Path Execution’ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ.ಸರ್ಕಾರಿ ಭೂಮಿಯ ಮಾಲೀಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಕರಣಗಳು ಜಿಲ್ಲಾಧಿಕಾರಿಗಳ ಲಾಗಿನ್‌ನಲ್ಲಿ ಅನುಮೋದನೆಗಾಗಿ ಬಾಕಿ ಇವೆಯೇ ಎಂಬುದನ್ನು ಪರಿಶೀಲಿಸಲು ಹೊಸದಾಗಿ ‘Validation’ ಸೌಲಭ್ಯವನ್ನು ಅಳವಡಿಸಲಾಗಿದೆ.

ಅಧಿಕಾರಿಗಳಿಗೆ ನೀಡಿರುವ ಸೂಚನೆಗಳು

ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು (ಆಪರೇಟರ್, ಆರ್.ಆರ್. ಶಿರಸ್ತೇದಾರ ಮತ್ತು ತಹಶೀಲ್ದಾರರು) ತಮ್ಮ ಲಾಗಿನ್‌ನಲ್ಲಿ ಬಾಕಿ ಇರುವ ಎಲ್ಲಾ ವಹಿವಾಟುಗಳನ್ನು ಜೂನ್ 30, 2026ರ ದಿನಾಂತ್ಯದೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿತ್ತು.ಹೊಸ ಕಂದಾಯ ವರ್ಷದ ವಹಿವಾಟುಗಳು ಸುಗಮವಾಗಿ ನಡೆಯುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಿಗದಿತ ಪರೀಕ್ಷಾ ಕ್ರಮಗಳನ್ನು ಅನುಸರಿಸಬೇಕೆಂದು ಆದೇಶಿಸಲಾಗಿದೆ.ಈ ಸಂಪೂರ್ಣ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಅಥವಾ ತಾಂತ್ರಿಕ ಲೋಪಗಳು ಸಂಭವಿಸಿದಲ್ಲಿ, ಆಯಾ ತಾಲ್ಲೂಕಿನ ತಹಶೀಲ್ದಾರರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಆಯುಕ್ತಾಲಯವು ಸ್ಪಷ್ಟಪಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ