LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಮೇ 25ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಾರಿ ಬದಲಾವಣೆ ಮುನ್ಸೂಚನೆ

ಬೆಂಗಳೂರು: ಕಾಂಗ್ರೆಸ್ ಬಳಿಕ ವಿಪಕ್ಷ ಬಿಜೆಪಿಯಲ್ಲಿಯೂ ಸಾಕಷ್ಟು ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮೇ 25ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ದೊರೆತಿದೆ.

ಬಿಜೆಪಿಯ ಆಂತರಿಕ ವಿದ್ಯಮಾನಗಳಿಗೆ ಸಂಬಂಧಿಸಿದಂತೆ, ಮೇ 25 ರ ನಂತರ ಮಹತ್ವದ ಬದಲಾವ್ನೆಗಳು ಆಗಲಿವೆ ಎನ್ನಲಾಗಿದೆ. ಪಕ್ಷದ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ, ಬಹುದಿನಗಳಿಂದ ಚರ್ಚೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲಗಳಿಗೆ ಶೀಘ್ರದಲ್ಲೇ ತೆರೆಬೀಳುವ ನಿರೀಕ್ಷೆ ಇದೆ. ಹೈಕಮಾಂಡ್ ಮೂಲಗಳ ಪ್ರಕಾರ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರನ್ನೇ ರಾಅಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವ ಸಾಧ್ಯತೆಗಳು ಇವೆ.

ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ಬಿ.ಎಸ್ ಯಡಿಯೂರಪ್ಪ ಅವರ 50 ವರ್ಷಗಳ ಸಾರ್ವಜನಿಕ ಜೀವನದ ‘ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಇಡೀ ರಾಜ್ಯದ ಮಠಾಧಿಪತಿಗಳು ಒಂದೇ ವೇದಿಕೆಗೆ ಬರಲು ಬಿಎಸ್​ವೈ ಅವರೇ ಕಾರಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದರು. ಇದು ಪರೋಕ್ಷವಾಗಿ ವಿಜಯೇಂದ್ರ ಅವರಿಗೆ ನೈತಿಕವಾಗಿ ದೊಡ್ಡ ಶಕ್ತಿ ತುಂಬಿದೆ ಎನ್ನಲಾಗಿದೆ.

ರಾಜ್ಯ ಬಿಜೆಪಿಯಕೋರ್ ಕಮಿಟಿ ಶೀಘ್ರದಲ್ಲೇ ಪುನಾರಚನೆಗೊಳ್ಳಲಿದ್ದು, ಹಾಲಿ ಇರುವ ಇಬ್ಬರು ಪ್ರಮುಖ ಸದಸ್ಯರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮನ್ನಣೆ ನೀಡುವ ಸಾಧ್ಯತೆ ಇದೆ.

ಚಿತ್ರದುರ್ಗದ ಸಮಾವೇಶವು ಕೇವಲ ಬಿಎಸ್​ವೈ ಅಭಿಮಾನೋತ್ಸವ ಎಂದು ವಿಜಯೇಂದ್ರ ಸ್ಪಷ್ಟಪಡಿಸುತ್ತಿದ್ದರೂ, ಇದು ಪರೋಕ್ಷವಾಗಿ ಯಡಿಯೂರಪ್ಪ ಅವರ ಶಕ್ತಿ ಪ್ರದರ್ಶನ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಈ ಅಭೂತಪೂರ್ವ ಯಶಸ್ಸಿನ ಬಳಿಕ ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈಕಮಾಂಡ್ ಜೊತೆಗೆ ಸಂಘ ಪರಿವಾರದಲ್ಲೂ ಮೃಧು ಧೋರಣೆ ಮೂಡಿದೆ.

ಮತ್ತೊಂದೆಡೆ, ಪುನಾರಚನೆಗೊಳ್ಳಲಿರುವ ಕೋರ್ ಕಮಿಟಿ ಸೇರಲು ಬಿಜೆಪಿಯ ಹಿರಿಯ ನಾಯಕರು ಭಾರಿ ಕಸರತ್ತು ನಡೆಸುತ್ತಿದ್ದಾರೆ. ಸಂಸದ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ವಿ. ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರು ಸಮಿತಿಯ ಸದಸ್ಯರಾಗಲು ತೀವ್ರ ಉತ್ಸುಕತೆ ಹೊಂದಿದ್ದಾರೆ. ಇದರೊಂದಿಗೆ ಶಾಸಕ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಅವರ ಹೆಸರೂ ಸಹ ಮುಂಚೂಣಿಯಲ್ಲಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಎರಡು ವರ್ಷ ಬಾಕಿ ಇರುವ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿಯಲ್ಲಿ ಹೈಕಮಾಂಡ್ ತೆಗೆದುಕೊಳ್ಳಲಿರುವ ಈ ನಿರ್ಧಾರಗಳು ತೀವ್ರ ಕುತೂಹಲ ಮೂಡಿಸಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ