LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಉದ್ಯೋಗ ಖಾತ್ರಿ ಹಣ ಪಾವತಿಸವರಿಗೆ ಸಚಿವ ಈಶ್ವರ್ ಖಂಡ್ರೆ ಶಾಕ್: 308 PDO, 74 EO, 12 DSಗಳಿಗೆ ಕಾರಣ ಕೇಳಿ ನೋಟಿಸ್

ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ -ವಿಬಿಜಿ ರಾಮ್ ಜಿಯಡಿ ಕಾರ್ಮಿಕರಿಗೆ ಕೂಲಿ ಹಣ ಪಾವತಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ 308 ಪಿಡಿಓ,  12 ಉಪ ಕಾರ್ಯದರ್ಶಿ  ಮತ್ತು 74 ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಕಾರ್ಯದರ್ಶಿ ಮತ್ತು 12 ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಸಚಿವರು, ವಿಬಿಜಿ ರಾಮ್ ಜಿ ಅಡಿ ಕೆಲಸ ಮಾಡುವ ಫಲಾನುಭವಿಗಳಿಗೆ 15 ದಿನಗಳ ಒಳಗಾಗಿ ಕೂಲಿ ಹಣ ಪಾವತಿ ಮಾಡದಿದ್ದರೆ ಸಂಬಂಧಿತ ಪಿಡಿಓಗಳನ್ನೇ ಹೊಣೆ ಮಾಡಲಾಗುವುದು ಎಂಬ ಸ್ಪಷ್ಟ ಸೂಚನೆ ನೀಡಿದ್ದರೂ 12 ಜಿಲ್ಲೆಗಳ 311 ಗ್ರಾಮ ಪಂಚಾಯತಿಗಳಲ್ಲಿ ವಿಳಂಬ ಆಗಿರುವ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತಿಗಳಿಗೆ ವಿಬಿಜಿ ರಾಮ್ ಜಿ ಕೂಲಿ ಹಣ ಬಿಡುಗಡೆ ಆಗಿದ್ದರೂ ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ಕೂಲಿ ಹಣ ಪಾವತಿಸದಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಸಚಿವರು, ಅಧಿಕಾರಿಗಳ ಇಂತಹ ನಿರ್ಲಕ್ಷ್ಯದಿಂದಾಗಿ, ಬರ ಪರಿಸ್ಥಿತಿಯಲ್ಲೂ ಜನ ವಿಬಿಜಿ ರಾಮ್ ಜಿ ಕೆಲಸಕ್ಕೆ ಬರಲು ಹಿಂದೇಟು ಹಾಕಿ, ಗುಳೆ ಹೋಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ 23, ಬೆಳಗಾವಿಯಲ್ಲಿ 52, ಚಾಮರಾಜನಗರದಲ್ಲಿ 13, ಚಿಕ್ಕಮಗಳೂರು ಜಿಲ್ಲೆಯಲ್ಲಿ 14, ದಕ್ಷಿಣ ಕನ್ನಡದಲ್ಲಿ 15, ಹಾಸನ ಜಿಲ್ಲೆಯಲ್ಲಿ 47, ಕೊಡಗು ಜಿಲ್ಲೆ 25, ಮಂಡ್ಯ ಜಿಲ್ಲೆ 13, ಮೈಸೂರು ಜಿಲ್ಲೆಯಲ್ಲಿ 53, ಶಿವಮೊಗ್ಗ ಜಿಲ್ಲೆ 14, ಉಡುಪಿ ಜಿಲ್ಲೆಯಲ್ಲಿ 23, ವಿಜಯಪುರ ಜಿಲ್ಲೆಯಲ್ಲಿ 16 ಸೇರಿ ಒಟ್ಟು 311 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ಕೂಲಿ ಹಣ ಪಾವತಿ ಮಾಡುವಲ್ಲಿ ವಿಳಂಬ ಆಗಿರುವ ಹಿನ್ನೆಲೆಯಲ್ಲಿ ಈ ಎಲ್ಲ ಗ್ರಾ.ಪಂ.ಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮೇಲ್ವಿಚಾರಣೆ ಮಾಡಬೇಕಾದ ಜವಾಬ್ದಾರಿ ಹೊತ್ತ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ಹಾಗೂ 12 ಜಿಲ್ಲಾ ಪಂಚಾಯತಿಗಳ ಉಪ ಕಾರ್ಯದರ್ಶಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ, ಸಮಜಾಯಿಷಿ ಪಡೆಯುವಂತೆ ಸೂಚಿಸಿದ್ದಾರೆ.

ಇನ್ನು ಮುಂದೆ ಈ ರೀತಿ ಯಾವುದೇ ಪಂಚಾಯತಿಯಲ್ಲಿ ಕೂಲಿ ಹಣ ಪಾವತಿಯಲ್ಲಿ ವಿಳಂಬ ಆಗದಂತೆ ಕ್ರಮ ವಹಿಸಲು ಇಲಾಖೆಯ ಕಾರ್ಯದರ್ಶಿ ಮತ್ತು 12 ಜಿಲ್ಲೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಮನ್ರೇಗಾದಲ್ಲಿದ್ದ 90:10ರ ಅನುಪಾತವನ್ನು ವಿಬಿಜಿ ರಾಮ್ ಜಿಯಲ್ಲಿ 60:40ಕ್ಕೆ ಬದಲಾಯಿಸಿದ ಪರಿಣಾಮ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾದರೂ, ಗ್ರಾಮೀಣ ಬಡವರು, ಹಿಂದುಳಿದವರು, ಪರಿಶಿಷ್ಟ ಜಾತಿ ಪಂಗಡದ ಬಡವರು, ಭೂರಹಿತ ಕೂಲಿ ಕಾರ್ಮಿಕರಿಗೆ ತೊಂದರೆಯಾಗಿ ಅವರು ಗುಳೆ ಹೋಗಬಾರದು ಹಾಗೂ ಗ್ರಾಮೀಣ ಬಡವರಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜುಲೈ 1ರಿಂದ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆಯಿಂದ ಯೋಜನೆಯ ಉದ್ದೇಶವೇ ನಾಶವಾಗುತ್ತದೆ ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆ