LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ಸಂಬಳ ಪ್ಯಾಕೇಜ್ ನೋಂದಣಿಗೆ ಆಗಸ್ಟ್ 31ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ಗುಂಪಿನ ಅಧಿಕಾರಿಗಳು ಹಾಗೂ ನೌಕರರಿಗೆ ಆರ್ಥಿಕ ಇಲಾಖೆ ಮಹತ್ವದ ಸಿಹಿಸುದ್ದಿ ನೀಡಿದೆ. ಕಡ್ಡಾಯ ಸಂಬಳ ಪ್ಯಾಕೇಜ್ (Salary Package) ನೋಂದಣಿ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು 2026ರ ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.

ಈ ಕುರಿತು ಆರ್ಥಿಕ ಇಲಾಖೆ (ವಿತ್ತೀಯ ಸುಧಾರಣೆ) ಲೆಕ್ಕಾಧಿಕಾರಿ ಎಸ್.ಆರ್. ನಳಿನ ಅವರು ಆದೇಶ ಹೊರಡಿಸಿದ್ದಾರೆ. ಈ ಹಿಂದೆ ನೀಡಿದ್ದ ನಿರ್ದೇಶನದಂತೆ 2026ರ ಜೂನ್ 30ರೊಳಗೆ ಎಲ್ಲಾ ಅರ್ಹ ಅಧಿಕಾರಿಗಳು ಹಾಗೂ ನೌಕರರು ಸಂಬಳ ಪ್ಯಾಕೇಜ್‌ನಲ್ಲಿ ನೋಂದಾಯಿಸಿಕೊಳ್ಳಬೇಕಿತ್ತು. ಗಡುವಿನೊಳಗೆ ನೋಂದಣಿ ಮಾಡದ ಅಧಿಕಾರಿಗಳ ಸಂಬಳ ವಿತರಣೆಯನ್ನು ತಡೆಹಿಡಿಯಲು ಸಹ ಸೂಚಿಸಲಾಗಿತ್ತು.

ಆದರೆ, ಹಲವು ಅಧಿಕಾರಿಗಳು ಮತ್ತು ನೌಕರರು ಇನ್ನೂ ನೋಂದಣಿ ಪೂರ್ಣಗೊಳಿಸದೇ ಇರುವುದರಿಂದ ಹಾಗೂ ಹೆಚ್ಚಿನ ಕಾಲಾವಕಾಶ ಕೋರಿ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರ ಗಡುವನ್ನು ಇನ್ನೂ ಎರಡು ತಿಂಗಳು ವಿಸ್ತರಿಸುವ ನಿರ್ಧಾರ ಕೈಗೊಂಡಿದೆ.ಇದರಿಂದ ಸರ್ಕಾರದಿಂದ ನೇರವಾಗಿ ಅಥವಾ ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ಗುಂಪಿನ ಅರ್ಹ ಅಧಿಕಾರಿಗಳು ಹಾಗೂ ನೌಕರರು ಇದೀಗ 2026ರ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.

ಆರ್ಥಿಕ ಇಲಾಖೆಯ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ಅವರ ಅನುಮೋದನೆಯೊಂದಿಗೆ ಈ ಆದೇಶ ಹೊರಡಿಸಲಾಗಿದ್ದು, ಗಡುವಿನೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಬಂಧಿತ ಇಲಾಖೆಗಳು ಮತ್ತು ನೌಕರರಿಗೆ ಸೂಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ