LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ‘ಕರ್ತವ್ಯ’ ಆ್ಯಪ್ ನೋಂದಣಿಯಲ್ಲಿ ಶೇ. 70.6 ರಷ್ಟು ಪ್ರಗತಿ ಸಾಧನೆ: ಸರ್ಕಾರ ಸ್ಪಷ್ಟನೆ ​

ಬೆಂಗಳೂರು: “ಕರ್ತವ್ಯ ಆ್ಯಪ್‌ ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ” ಎಂಬ ಕೆಲವು ಮಾಧ್ಯಮಗಳ ವರದಿಗಳಿಗೆ ಸರ್ಕಾರವು ಅಧಿಕೃತ ಸ್ಪಷ್ಟೀಕರಣವನ್ನು ನೀಡಿದೆ.

ಪ್ರಸ್ತುತ ‘ಕರ್ತವ್ಯ'(KAAMS) ಯೋಜನೆಯಡಿ ಉದ್ಯೋಗಿಗಳ ನೋಂದಣಿ ಪ್ರಕ್ರಿಯೆಯು ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಶೇಕಡ 70.6 ಕ್ಕಿಂತ ಹೆಚ್ಚು ನೌಕರರು ಯಶಸ್ವಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. 

ವೇಗದ ಪ್ರಗತಿ:

ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ 2,13,925 ನೌಕರರ ಅಪೂರ್ಣ ನೋಂದಣಿಯ ಅಂಕಿ-ಅಂಶಗಳು ಜೂನ್ 12, 2026 ರವರೆಗಿನ ಮಾಹಿತಿಯಾಗಿದ್ದವು. ಆದರೆ ಕಳೆದ 4-5 ದಿನಗಳಲ್ಲಿ ನಡೆಸಲಾದ ವಿಶೇಷ ಆಂದೋಲನದಿಂದಾಗಿ ಈ ಸಂಖ್ಯೆ 2026 ನೇ ಜೂನ್ 18 ರ ವೇಳೆಗೆ 1,40,433 ಕ್ಕೆ ಕುಸಿದಿದೆ. ಅಂದರೆ ಕೇವಲ ಒಂದು ವಾರದಲ್ಲಿ ನೋಂದಣಿಯಾಗದ ನೌಕರರ ಸಂಖ್ಯೆಯಲ್ಲಿ ಶೇ. 34.4 ರಷ್ಟು ಭಾರಿ ಇಳಿಕೆಯಾಗಿದೆ. 

ನೋಂದಣಿ ಸ್ಥಿತಿಗತಿ :

ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ದತ್ತಾಂಶದ ಪ್ರಕಾರ, ಒಟ್ಟು 43 ಪ್ರಮುಖ ಇಲಾಖೆಗಳು ಹಾಗೂ 137 ಸರಣಿ ಇಲಾಖೆಗಳು/ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 4,78,181 ನೌಕರರ ಪೈಕಿ 3,37,748 (ಶೇ. 70.6) ನೌಕರರು ಈಗಾಗಲೇ ಆಪ್‌ನಲ್ಲಿ ಯಶಸ್ವಿಯಾಗಿ ನೋಂದಾಯಿಸಿಕೊಂಡಿದ್ದಾರೆ.

ದೈನಂದಿನ ಸಕ್ರಿಯ ಬಳಕೆ :

2026 ನೇ ಜೂನ್ 18 ರ ಬೆಳಿಗ್ಗೆ 11 ಗಂಟೆಯ ಒಳಗೆ ಒಟ್ಟು ನೋಂದಾಯಿತ ಬಳಕೆದಾರರಲ್ಲಿ ಸುಮಾರು ಶೇ. 57 ರಷ್ಟು (1,92,605 ನೌಕರರು) ಉದ್ಯೋಗಿಗಳು ಆಪ್ ಮೂಲಕ ತಮ್ಮ ಹಾಜರಾತಿಯನ್ನು ದಾಖಲಿಸಿದ್ದಾರೆ.  ಬಾಕಿ ಉಳಿದಿರುವ ಶೇ. 29.4 ರಷ್ಟು ನೌಕರರ ನೋಂದಣಿಗಾಗಿ ಇ-ಆಡಳಿತ ಕೇಂದ್ರವು (CeG) ವಿಶೇಷ ತರಬೇತಿ ಮತ್ತು ನೋಂದಣಿ ಶಿಬಿರಗಳನ್ನು ಆಯೋಜಿಸಿದೆ. ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕಾಗಿ ನೋಡಲ್ ಅಧಿಕಾರಿಗಳು, ಸಹಾಯವಾಣಿ ಮತ್ತು ಎಐ (AI) ಆಧಾರಿತ ವಾಯ್ಸ್ ಬಾಟ್ ಸೌಲಭ್ಯವನ್ನು ಕಲ್ಪಿಸಲಾಗಿದೆ.

 ​ಎಲ್ಲಾ ಅಧಿಕಾರಿಗಳು ಮತ್ತು ನೌಕರರು ನಿಗದಿತ ಸಮಯದೊಳಗೆ ಶೇ. 100 ರಷ್ಟು ನೋಂದಣಿ ಪೂರ್ಣಗೊಳಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

 ‘ಕರ್ತವ್ಯ’ ತಂತ್ರಾಂಶವು ಸರ್ಕಾರಿ ನೌಕರರ ಹಾಜರಾತಿಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲು ರೂಪಿಸಲಾದ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಸರ್ಕಾರ ಪುನರುಚ್ಚರಿಸಿದೆ. 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ