LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಅಯೋಧ್ಯೆ ರಾಮಮಂದಿರದಲ್ಲಿ 70 ಬಾರಿ ಹುಂಡಿ ಕಳ್ಳತನ ! ₹7.5 ಕೋಟಿ ಎಗರಿಸಿದ್ದ ಗ್ಯಾಂಗ್‌ನ ಕರಾಳ ಕೃತ್ಯ ಬಯಲು

ಅಯೋಧ್ಯೆ: ದೇಶದ ಕೋಟ್ಯಂತರ ಹಿಂದೂಗಳ ಭಕ್ತಿಯ ಕೇಂದ್ರವಾಗಿರುವ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬೆಚ್ಚಿಬೀಳಿಸುವ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಹಲವು ತಿಂಗಳುಗಳಿಂದ ಸಂಘಟಿತ ತಂಡವೊಂದು ( ಹಣ ಎಣಿಸುವ ಗ್ಯಾಂಗ್)‌ ರಾಮಮಂದಿರದ ಹುಂಡಿಯಿಂದ ಹಣ ಕಳವು ಮಾಡುತ್ತಿದ್ದು, ಸುಮಾರು ₹7.5 ಕೋಟಿ ಎಗರಿಸಿರುವ ಆರೋಪ ಕೇಳಿಬಂದಿದೆ.

ಪ್ರಕರಣದ ತನಿಖೆ ವೇಳೆ ಆರೋಪಿಗಳು ಅತ್ಯಂತ ವ್ಯವಸ್ಥಿತವಾಗಿ ಕಳ್ಳತನ ನಡೆಸಿರುವುದು ಬಹಿರಂಗವಾಗಿದೆ. ದೇವಸ್ಥಾನದ ಭದ್ರತಾ ವ್ಯವಸ್ಥೆಯನ್ನು ಚಾಣಾಕ್ಷತನದಿಂದ ಬಳಸಿಕೊಂಡು, ಸಿಸಿಟಿವಿ ಕ್ಯಾಮೆರಾಗಳ ಕಣ್ತಪ್ಪಿಸಿ ಹಲವು ಬಾರಿ ಹಣ ಕಳವು ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ವರದಿಗಳ ಪ್ರಕಾರ, ಸುಮಾರು 70 ಬಾರಿ ಹುಂಡಿ ಹಣವನ್ನು ಕಳವು ಮಾಡಲಾಗಿದೆ ಎನ್ನಲಾಗಿದೆ.

ಕಳ್ಳತನ ನಡೆಸಿದ್ದು ಹೇಗೆ?

ತನಿಖೆಯ ಮಾಹಿತಿ ಪ್ರಕಾರ, ಹುಂಡಿ ತೆರೆಯುವ ವೇಳೆ ಒಬ್ಬ ಆರೋಪಿ ಸಿಸಿಟಿವಿ ಕ್ಯಾಮೆರಾಗೆ ಅಡ್ಡವಾಗಿ ನಿಂತು ದೃಶ್ಯಗಳು ದಾಖಲಾಗದಂತೆ ಮಾಡುತ್ತಿದ್ದ. ಇದೇ ವೇಳೆ ಮತ್ತೊಬ್ಬ ಆರೋಪಿ ಎಣಿಕೆಗೆ ತೆಗೆದಿದ್ದ ಹಣವನ್ನು ಕದ್ದುಕೊಳ್ಳುತ್ತಿದ್ದ.

ಇದಲ್ಲದೆ, ಹಣದ ಕಂತುಗಳಲ್ಲಿ ಹೆಚ್ಚುವರಿ ನೋಟುಗಳನ್ನು ಸೇರಿಸಿ ಲೆಕ್ಕದಲ್ಲಿ ವ್ಯತ್ಯಾಸ ಉಂಟುಮಾಡಿ, ಉಳಿದ ಹಣವನ್ನು ಕಳವು ಮಾಡಲಾಗುತ್ತಿತ್ತು. ಕದ್ದ ಹಣವನ್ನು ದೇವಾಲಯದ ಶೌಚಾಲಯದಲ್ಲಿ ಅಡಗಿಸಿಟ್ಟು ನಂತರ ತಂಡದ ಸದಸ್ಯರು ಹಂಚಿಕೊಳ್ಳುತ್ತಿದ್ದರು ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಬಂಧಿತ ೮ ಮಂದಿ ಆರೋಪಿಗಳ ಪೈಕಿ ಓರ್ವ ಕದ್ದ ಹಣವನ್ನು ಸಗಣಿ ಕೆಳಗೆ ಬಚ್ಚಿಡುತ್ತಿದ್ದ. ಅಲ್ಲದೇ ಮತ್ತೋರ್ವ ಆರೋಪಿ ಕದ್ದ ಹಣವನ್ನು ಶೌಚಾಲಯದ ಮೂಲಕ ಸಾಗಿಸುತ್ತಿದ್ದನು.

8 ಆರೋಪಿಗಳ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 29ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಕೆಲವರ ಪಾತ್ರವಿದೆಯೇ ಎಂಬ ಕುರಿತು ಪರಿಶೀಲನೆ ನಡೆಯುತ್ತಿದೆ.

ಟ್ರಸ್ಟ್‌ನಲ್ಲಿ ರಾಜೀನಾಮೆ

ಈ ಪ್ರಕರಣದ ನೈತಿಕ ಹೊಣೆ ಹೊತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿದಂತೆ ಇಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ರಾಮಮಂದಿರದ ಭದ್ರತಾ ವ್ಯವಸ್ಥೆ ಮತ್ತು ಹಣದ ನಿರ್ವಹಣೆ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ