LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ದಳಪತಿ ಸರ್ಕಾರದಲ್ಲಿ ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕಿ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ

ಚೆನ್ನೈ: ತಮಿಳುನಾಡಿನಲ್ಲಿ ಇಂದಿನಿಂದ ದಳಪತಿ ವಿಜಯ್ ಯುಗಾರಂಭವಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಜಯ್ ಜೊತೆಗೆ ಓರ್ವ ಮಹಿಳಾ ಶಾಸಕಿ ಸೇರಿದಂತೆ 9 ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ನಟ ವಿಜಯ್ ತಮಿಳುನಾಡಿನ 24ನೇ ಸಿಎಂ ಆಗಿ ಅಧಿಕಾರ ವಹಿಸಿಕೊಂಡರು. ಅವರೊಂದಿಗೆ 9 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಯಾವುದೇ ಉಪಮುಖ್ಯಮಂತ್ರಿ ಹುದ್ದೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನೆಹರು ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಮತ್ತು ಬೆಂಬಲಿಗರ ಸಮ್ಮುಖದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಟಿ ತ್ರಿಶಾ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು. ಎಂಜಿಆರ್, ಕರುಣಾನಿಧಿ ಮತ್ತು ಜಯಲಲಿತಾರಂತಹ ದಿಗ್ಗಜರು ಆಳಿದ ನೆಲದಲ್ಲಿ ಈಗ ವಿಜಯ್ ಆಡಳಿತ ಆರಂಭವಾಗಿದೆ.

ವಿಜಯ್ ಅವರೊಂದಿಗೆ ಒಂಬತ್ತು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಎಸ್. ಕೀರ್ತನಾ
ಕೆ.ಎ. ಸೆಂಗೊಟ್ಟೈಯನ್
ಆಧವ್ ಅರ್ಜುನ್
ಬಸ್ಸಿ ಆನಂದ್
ಡಾ. ಅರುಣ್ ರಾಜ್‌
ವೆಂಕಟರಮಣನ್‌
ನಿರ್ಮಲ್‌ ಕುಮಾರ್‌
ರಾಜ್‌ ಮೋಹನ್‌
ಡಾ. ಟಿ.ಕೆ. ಪ್ರಭು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಶಿವಕಾಶಿ ಕ್ಷೇತ್ರದ 29 ವರ್ಷದ ಟಿವಿಕೆ ಶಾಸಕಿ ಸೆಲ್ವಿ ಕೀರ್ತನಾ ಇದೀಗ ಸಿಎಂ ವಿಜಯ್ ಅವರ ಸಂಪುಟದಲ್ಲಿ ಸಚಿವೆಯಾಗಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ಎಸ್.ಕೀರ್ತನಾ ಗಮನ ಸೆಳೆದಿದ್ದಾರೆ.

29 ವರ್ಷದ ಕೀರ್ತನಾ ತಮಿಳುನಾಡಿನ ಅತ್ಯಂತ ಕಿರಿಯ ಸಚಿವರು. ಸಿಎಂ ವಿಜಯ್ ಅವರ ಸಂಪುಟದಲ್ಲಿ ಮೊದಲ ಏಕೈಕ ಮಹಿಳಾ ಸಚಿವೆ. ಭಾರತದ ಪಟಾಕಿ ರಾಜಧಾನಿ ಎಂದೇ ಹೆಸರಾಗಿರುವ ಶಿವಕಾಶಿ ಕ್ಷೇತ್ರದಲ್ಲಿ 7 ದಶಕಗಳ ಪುರುಷ ಪ್ರಾಬಲ್ಯವನ್ನು ಕೊನೆಗೊಳಿಸಿ ಆ ಕ್ಷೇತ್ರದಲ್ಲಿ ಮೊದಲ ಬಾರಿ ಟಿವಿಕೆಯಿಂದ ಗೆಲುವು ಸಾಧಿಸಿ ಮೊದಲ ಮಹಿಳಾ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಈಗ ವಿಜಯ್ ಸಂಪುಟದಲ್ಲಿ ಸಚಿವೆಯಾಗಿ ಪದಗ್ರಹಣ ಮಾಡಿದ್ದಾರೆ.

ಸ್ನಾತಕೋತ್ತರ ಪದವೀಧರೆಯಾಗಿರುವ ಕೀರ್ತನಾ, ಈ ಹಿಂದೆ ತಮಿಳುನಾಡು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವು ಪ್ರಮುಖ ನಾಯಕರಿಗೆ ರಾಜಕೀಯ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ`ಸರ್ಕಾರಿ ನೌಕರರೇ’ ಗಮನಿಸಿ : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ`PF’ ಖಾತೆದಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ 4 ಸೌಲಭ್ಯಗಳು.!ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವೃತ್ತಿಪರ ಶಿಕ್ಷಣದಲ್ಲಿ ಮೀಸಲಾತಿ, ಉಚಿತ ಸ್ಪರ್ಧಾತ್ಮಕ ತರಬೇತಿ ಘೋಷಣೆBREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸಾವು.!ALERT : ಸೋಷಿಯಲ್ ಮೀಡಿಯಾದಲ್ಲಿ ಇಂತಹ ಪೋಸ್ಟ್ ಹಾಕಿದರೆ ಜೈಲು ಶಿಕ್ಷೆ ಫಿಕ್ಸ್.!ಸಾಲ ಪಡೆದ ವ್ಯಕ್ತಿ ಮರುಪಾವತಿ ಮಾಡದಿದ್ದರೆ ಯಾರು ಕಟ್ಟಬೇಕು? ಬ್ಯಾಂಕ್ ನಿಯಮಗಳು ಏನು ಹೇಳುತ್ತವೆ?ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 1 ಲಕ್ಷ ಸರ್ಕಾರಿ, 5 ಲಕ್ಷ ಖಾಸಗಿ ಉದ್ಯೋಗಗಳ ಸೃಷ್ಟಿ.!BIG NEWS : GSTಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ: ಹೈಕೋರ್ಟ್ ಮಹತ್ವದ ಆದೇಶALERT : ಸಾರ್ವಜನಿಕರೇ ಗಮನಿಸಿ : ತಪ್ಪದೇ ಈ 6 ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಿ.!BIG NEWS : ಮೊದಲ ಹೆಂಡತಿ ಇರುವಾಗಲೇ 2ನೇ ಪತ್ನಿಗೆ ಜೀವನಾಂಶದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು