LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!

ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಚಾಮುಂಡಿಬೆಟ್ಟದಲ್ಲಿ ಶುಭ ಧನುರ್ ಲಗ್ನದಲ್ಲಿ ಗವಿಮಠದ ಸಿದ್ದೇಶ್ವರಶ್ರೀಗಳು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಹಾಗೂ ನೂರಾರು ಮಠಾಧೀಶರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಉದ್ಘಾಟನಾ ಸಮಾರಂಭದ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಚಾಮುಂಡಿ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಅಂತಿಮಗೊಂಡಿವೆ. ಪ್ರಧಾನ ಅರ್ಚಕ ಡಾ. ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ವಿಶೇಷ ಪೂಜೆಗಳು ನೆರವೇರಿವೆ. ಚಾಮುಂಡೇಶ್ವರಿಯ ಮಹಿಷಾಸುರ ಮರ್ಧಿನಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಬೆಳ್ಳಿ ಪಲ್ಲಕ್ಕಿಯಲ್ಲಿರಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಗಣ್ಯರು ದಸರಾಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಮತ್ತೊಂದೆಡೆ, ಮೈಸೂರು ಅರಮನೆಯಲ್ಲಿ ರಾಜಪರಂಪರೆಯ ದಸರಾ ಸಡಗರ ಕಳೆಗಟ್ಟಿದೆ. ಬೆಳಗ್ಗೆ ರತ್ನಾಖಚಿತ ಸಿಂಹಾಸನಕ್ಕೆ ಸಿಂಹ ಮುಖ ಜೋಡಣೆ ಹಾಗೂ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕಂಕಣ ಧಾರಣೆ ನೆರವೇರಿದೆ. ಮುಂದುವರಿದು, ಶುಭ ಲಗ್ನದಲ್ಲಿ ಸಿಂಹಾಸನಾರೋಹಣ ಹಾಗೂ ತೀರ್ಥ ಪ್ರಸಾದ ಸ್ವೀಕಾರ ಕಾರ್ಯ ನಡೆಯಲಿದ್ದು, ಮಧ್ಯಾಹ್ನ ಚಾಮುಂಡಿ ತಾಯಿಯನ್ನು ಚಾಮುಂಡೇಶ್ವರಿ ತೊಟ್ಟಿಯಿಂದ ಕನಕ ತೊಟ್ಟಿಗೆ ತಂದು ನವರಾತ್ರಿ ಪೂಜೆಗಳನ್ನು ನೆರವೇರಿಸಲಾಗುತ್ತದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮೈಸೂರು ದಸರಾ ಸಂಭ್ರಮ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿರುವ ಸಿಎಂ ಡಿ.ಕೆ. ಶಿವಕುಮಾರ್ರಾಮಗಿರಿ ರೈಲ್ವೆ ನಿಲ್ದಾಣದಲ್ಲಿ ಬೆಳಗಾವಿ–ಮೈಸೂರು ರೈಲುಗಳ ತಾತ್ಕಾಲಿಕ ನಿಲುಗಡೆ ಅವಧಿ ವಿಸ್ತರಣೆBREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!