LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ: e-PARನಲ್ಲಿ ಆಸ್ತಿ-ಹೊಣೆಗಾರಿಕೆ ವಿವರಗಳನ್ನು ದಾಖಲಿಸುವಂತೆ ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ತಮ್ಮ ಸ್ಥಿರಾಸ್ತಿ, ಚರಾಸ್ತಿ ಹಾಗೂ ಹೊಣೆಗಾರಿಕೆಗಳ ವಿವರಗಳನ್ನು ಕಡ್ಡಾಯವಾಗಿ ಕರ್ನಾಟಕ e-PAR Application‌ನ IPR (Immovable Property Return) Module ಮೂಲಕವೇ ಆನ್‌ಲೈನ್‌ನಲ್ಲಿ ದಾಖಲಿಸಬೇಕು ಎಂದು ಸರ್ಕಾರ ಆದೇಶಿಸಿದೆ.

ಸರ್ಕಾರ ಹೊರಡಿಸಿರುವ ಆದೇಶದಂತೆ 2026ರ ಆಗಸ್ಟ್ 20ರಿಂದ IPR Module ಜಾರಿಗೆ ಬರಲಿದ್ದು, 2025-26ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಇದೇ ದಿನಾಂಕದಿಂದ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಮುಂದಿನ ವರ್ಷಗಳಿಂದ ಪ್ರತಿ ವರ್ಷದ ಮಾರ್ಚ್ ಅಂತ್ಯದೊಳಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಆಸ್ತಿ ಹಾಗೂ ಹೊಣೆಗಾರಿಕೆ ವಿವರಗಳನ್ನು ಇದೇ ಪೋರ್ಟಲ್‌ನಲ್ಲಿ ದಾಖಲಿಸುವುದು ಕಡ್ಡಾಯವಾಗಲಿದೆ.

ಈ ಹಿಂದೆ ಕರ್ನಾಟಕ ಸರ್ಕಾರ ಸಚಿವಾಲಯದ ಸಿಬ್ಬಂದಿ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸುತ್ತಿದ್ದರು. ಇದೀಗ ಪಾರದರ್ಶಕತೆ ಮತ್ತು ಡಿಜಿಟಲ್ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ All India Service (AIS) ಅಧಿಕಾರಿಗಳ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಸಿಬ್ಬಂದಿಗೂ e-PAR ವೇದಿಕೆಯಲ್ಲಿ ಆಸ್ತಿ ವಿವರ ದಾಖಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

ಕಂದಾಯ ಇಲಾಖೆಯ ಗ್ರೇಡ್-1 ಮತ್ತು ಗ್ರೇಡ್-2 ತಹಶೀಲ್ದಾರರಿಗೂ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದ್ದು, ಇದೀಗ ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಿಗೂ ವಿಸ್ತರಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!